ಕುಲ್ಗಾಂನಲ್ಲಿ ಎನ್ಕೌಂಟರ್: ಸೇನಾಪಡೆ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ರೆದ್ವಾನಿ ಬಾಲಾ ಎಂಬ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಉಜ್ರಾಮ್ ಪತ್ರಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನೊಬ್ಬನನ್ನು ಹೊಡೆದುರಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


