ಪಂಜಾಬ್ ಚುನಾವಣೆಗೆ ಅಮರಿಂದರ್ ಸಿಂಗ್ ಜೊತೆ ಮೈತ್ರಿ ಘೋಷಿಸಿದ ಬಿಜೆಪಿ
ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ.

ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ.
ಅಮರಿಂದರ್ ಸಿಂಗ್ ಅವರು ಇಂದು ಬಿಜೆಪಿ ಪಂಜಾಬ್ ಉಸ್ತುವಾರಿ ಮತ್ತು ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಸಭೆಯ ಬಳಿಕ ಉಭಯ ಪಕ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.
"ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಲಿವೆ ಮತ್ತು ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ" ಎಂದು ಶೇಖಾವತ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸೀಟು ಹಂಚಿಕೆಯ ವಿವರಗಳನ್ನು ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುವುದು ಎಂದು ಶೇಖಾವತ್ ಹೇಳಿದ್ದಾರೆ. ಈ ವೇಳೆ ಅಮರಿಂದರ್ ಸಿಂಗ್ ಅವರ ಜತೆ ಇದ್ದರು.
"ಈ ಮೈತ್ರಿಕೂಟವು ಖಂಡಿತವಾಗಿಯೂ ಚುನಾವಣೆಯಲ್ಲಿ ಶೇಕಡಾ 101 ರಷ್ಟು ಗೆಲ್ಲುತ್ತದೆ ಮತ್ತು ಸೀಟುಗಳನ್ನು ಅಂತಿಮಗೊಳಿಸುವಾಗ ಗೆಲ್ಲುವು ಪ್ರಮುಖ ಮಾನದಂಡವಾಗಿದೆ" ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ತಮ್ಮದೇ ಆದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ ಸ್ಥಾಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


