ಪನಾಮಾ ಪೇಪರ್ಸ್ ಲೀಕ್: ಬಾಲಿವುಡ್ ನಟಿ ಐಶ್ವರ್ಯಾ ರೈಗೆ ಮತ್ತೆ ಸಂಕಷ್ಟ; ಇಡಿ ಸಮನ್ಸ್ ಜಾರಿ
ಪನಾಮಾ ಪೇಪರ್ಸ್ ಲೀಕ್ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ಜಾರಿ(ED Summons) ಮಾಡಿದೆ.

ಮುಂಬೈ: ಪನಾಮಾ ಪೇಪರ್ಸ್ ಲೀಕ್ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ಜಾರಿ(ED Summons) ಮಾಡಿದೆ.
ಜಾರಿ ನಿರ್ದೇಶಾನಾಲಯ (Enforcement Directorate) ಸಂಸ್ಥೆಯು ತನಿಖೆ ನಡೆಸುತ್ತಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
‘ಪನಾಮಾ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಈ ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್ ನೀಡಿರುವುದು ಅಚ್ಚರಿ ಮೂಡಿಸಿದೆ.
ಮೂಲಗಳ ಪ್ರಕಾರ ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


