ರಾಜ್ಯಸಭಾ ಸದಸ್ಯರ ಅಮಾನತು: ಸಮಸ್ಯೆ ಬಗೆಹರಿಸಲು ಮೋದಿ ಸರ್ಕಾರ ನೀಡಿದ ಆಹ್ವಾನ ತಿರಸ್ಕರಿಸಿದ ಪ್ರತಿಪಕ್ಷಗಳು
ಸಂಸತ್ತಿನ ಚಳಿಗಾಲದ ಅಧಿವೇಶನ ಅಂತಿಮ ವಾರಕ್ಕೆ ಕಾಲಿಡುತ್ತಿದ್ದು, 12 ರಾಜ್ಯಸಭಾ ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ...

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಅಂತಿಮ ವಾರಕ್ಕೆ ಕಾಲಿಡುತ್ತಿದ್ದು, 12 ರಾಜ್ಯಸಭಾ ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ನೀಡಿದ ಆಹ್ವಾನವನ್ನು ಪ್ರತಿಪಕ್ಷಗಳು ತಿರಸ್ಕರಿಸಿವೆ.
ಕೇಂದ್ರ ಸರ್ಕಾರ ಐದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದೆ. ಆದರೆ ಪ್ರತಿ ಪಕ್ಷಗಳು ಈ ಸಭೆಗೆ ಹಾಜರಾಗುವ ಸಾಧ್ಯತೆಯಿಲ್ಲ ಮತ್ತು ಎಲ್ಲಾ ಪ್ರತಿ ಪ್ರತಿಪಕ್ಷಗಳೊಂದಿಗೆ ಈ ವಿಷಯ ಚರ್ಚಿಸಬೇಕೆಂದು ಬಯಸುತ್ತಿವೆ.
ವಿರೋಧ ಪಕ್ಷಗಳ ನಾಯಕರು ಸೋಮವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ಸೇರಿ ಮುಂದಿನ ನಡೆ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ.
ಇದನ್ನು ಓದಿ: 12 ಸಂಸದರ ಅಮಾನತು ರದ್ಧತಿಗೆ ಪ್ರತಿಪಕ್ಷಗಳ ಬಿಗಿಪಟ್ಟು: ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆ
12 ಸಂಸದರ ಅಮಾನತು ವಿರುದ್ಧದ ಹೋರಾಟದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ. ವಿಪಕ್ಷಗಳಲ್ಲಿ ಒಡಕು ಮೂಡಿಸಲು ಅಧಿವೇಶನದ ಅಂತ್ಯದಲ್ಲಿ ಐದು ಪಕ್ಷಗಳನ್ನು ಮಾತ್ರ ಚರ್ಚೆಗೆ ಕರೆಯಲಾಗಿದೆ ಎಂದು ಅಮಾನತುಗೊಂಡ 12 ಸಂಸದರ ಪೈಕಿ ಒಬ್ಬರಾದ ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


