ದೆಹಲಿಯಲ್ಲಿ ಮತ್ತೆ ಇಬ್ಬರಿಗೆ ಓಮಿಕ್ರಾನ್ ಪಾಸಿಟಿವ್, ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ
ದೇಶದಲ್ಲಿ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತೆ ಎರಡು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ...

ನವದೆಹಲಿ: ದೇಶದಲ್ಲಿ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಮತ್ತೆ ಎರಡು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಒಟ್ಟು 24 ಓಮಿಕ್ರಾನ್ ಸೋಂಕಿತರಲ್ಲಿ 12 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
"ದೆಹಲಿಯಲ್ಲಿ ಇನ್ನೂ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿಂದೆ ಜಿನೋಮ್ ಸೀಕ್ವೆನ್ಸಿಂಗ್ಗಾಗಿ ಕಳುಹಿಸಲಾದ ಅವರ ಮಾದರಿಗಳು ಪಾಸಿಟಿವ್ ಬಂದಿವೆ. ಈ ಇಬ್ಬರಲ್ಲಿ ಒಬ್ಬರು ಬ್ರಿಟನ್ ನಿಂದ ಬಂದಿದ್ದರೆ, ಇನ್ನೊಬ್ಬರು ಘಾನಾದಿಂದ ಬಂದಿದ್ದಾರೆ" ಎಂದು ಮೂಲವೊಂದು ತಿಳಿಸಿದೆ.
ದಾಖಲಾದ ಹೆಚ್ಚಿನ ರೋಗಿಗಳು ಲಕ್ಷಣರಹಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


