ದೇಶ

ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ವರ್ಗಾಯಿಸಿದ ಪ್ರಧಾನಿ ಮೋದಿ 

ಮಹಿಳಾ ಸಬಲೀಕರಣ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಇದರಿಂದ ಸ್ವ ಸಹಾಯ ಸಂಘಗಳ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಪ್ರಯೋಜನವಾಗಲಿದೆ.

ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ವರ್ಗಾಯಿಸಿದ ಪ್ರಧಾನಿ ಮೋದಿ 
ಪ್ರಧಾನಿ ನರೇಂದ್ರ ಮೋದಿ ಮತ್ತಿತರರು
Published On :

ಪ್ರಯಾಗ್ ರಾಜ್: ಮಹಿಳಾ ಸಬಲೀಕರಣ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಇದರಿಂದ ಸ್ವ ಸಹಾಯ ಸಂಘಗಳ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಪ್ರಯೋಜನವಾಗಲಿದೆ. 

ಪ್ರಧಾನ ಮಂತ್ರಿ ಕಾರ್ಯಾಲಯದ ಪ್ರಕಾರ, ದೀನ್ ದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಈ ಹಣವನ್ನು ವರ್ಗಾಯಿಸಲಾಗಿದೆ.  

ಪ್ರತಿ ಸ್ವಹಾಯ ಸಂಘಗಳಿಗೆ ರೂ. 1.10 ಲಕ್ಷದಂತೆ 80 ಸಾವಿರ ಸ್ವ ಸಹಾಯ ಸಂಘಗಳು ಸಮುದಾಯ ಹೂಡಿಕೆ ನಿಧಿಯನ್ನು ಪಡೆದಿದ್ದರೆ,  ರೂ.15 ಸಾವಿರದಂತೆ 60 ಸ್ವ ಸಹಾಯ ಸಂಘಗಳು ಆವರ್ತ ನಿಧಿಯನ್ನು ಸ್ವೀಕರಿಸಿವೆ.

ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ಒದಗಿಸುವ ಮುಖ್ಯಮಂತ್ರಿ ಕನ್ಯಾ ಸುಮಂಗಳಾ ಯೋಜನೆಯ 1 ಲಕ್ಷ ಫಲಾನುಭವಿಗಳಿಗೆ ಹಣವನ್ನು ಪ್ರಧಾನಿ ವರ್ಗಾಯಿಸಿದರು.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.