ಮೀಜೊರಾಂನಲ್ಲಿ 44 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ
ಮಿಜೋರಾಂನಲ್ಲಿ 44 ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಐಜ್ವಾಲ್: ಮಿಜೋರಾಂನಲ್ಲಿ 44 ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈಶಾನ್ಯ ರಾಜ್ಯದಲ್ಲಿ ಹೊಸದಾಗಿ ಕೊರೋನಾವೈರಸ್ ಸಾವಿನ ಸಂಖ್ಯೆ ವರದಿಯಾಗಿಲ್ಲ, ಒಟ್ಟಾರೇ ಸಾವಿನ ಸಂಖ್ಯೆ 535 ಆಗಿರುವುದಾಗಿ ಎಂದು ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಮಿಜೋರಾಂನಲ್ಲಿ ಸದ್ಯ 1,847 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 238 ಸೋಂಕಿತರು ಸೇರಿದಂತೆ ಇಲ್ಲಿಯವರೆಗೂ 1,37,761 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ ನಲ್ಲಿ ಓಮಿಕ್ರಾನ್ ಪತ್ತೆಯಾದ ನಂತರ ವಿವಿಧ ರಾಷ್ಟ್ರಗಳಿಂದ 139 ಜನರು ಮಿಜೋರಾಂಗೆ ಆಗಮಿಸಿರುವುದಾಗಿ ಮತ್ತೊಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


