ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಅಮಿತ್ ಶಾ; ಸರ್ಕಾರದಿಂದ ವರದಿ ಕೇಳಿದ ಎಂಎಚ್ಎ
ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.

ನವದೆಹಲಿ: ಲೂಧಿಯಾನ ಕೋರ್ಟ್ ಬಳಿ ಸ್ಫೋಟ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.
ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಬಗ್ಗೆ ಹಾಗೂ ರಾಜ್ಯದ ಪರಿಸ್ಥಿತಿಯ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಗೃಹ ಸಚಿವಾಲಯ ಸ್ಫೋಟದ ಬಗ್ಗೆ ಪಂಜಾಬ್ ಸರ್ಕಾರದಿಂದ ವರದಿ ಕೇಳಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಹಂತದ ತನಿಖೆಯ ಮಾಹಿತಿಯ ಅಂಶಗಳ ಬಗ್ಗೆ ಮಾಹಿತಿ ನೀಡುವಂತೆ ಎಂಎಚ್ಎ ಸರ್ಕಾರವನ್ನು ಕೇಳಿದೆ. ಘಟನಾ ಸ್ಥಳಕ್ಕೆ ಎನ್ಎಸ್ ಜಿ ಭೇಟಿ ನೀಡಿದ್ದು ಫೋರೆನ್ಸಿಕ್ ವಿಶ್ಲೇಷಣೆಯನ್ನು ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


