ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರ
ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಿತವಾಗುತ್ತಿರುವ ರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ತನಿಖೆಗೆ ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ, ರಾಮ ಮಂದಿರ ನಿರ್ಮಾಣ ಕುರಿತು ಇದ್ದ ವಿವಾದಕ್ಕೆ ತೆರೆಬಿದ್ದ ನಂತರ ಶಾಸಕರು, ಮೇಯರ್‍ಗಳು, ಆಯುಕ್ತರ ಸಂಬಂಧಿಕರು, ಎಸ್‍ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವದಂತಿ ಹರಡಿತ್ತು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಇದೇ ವಿಷಯ ಪ್ರಸ್ತಾಪಿಸಲು ಪ್ರಯತ್ನಿಸಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಇದನ್ನು “ಭೂ ಹಗರಣ” ಎಂದು ಕರೆದರು.
'ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ? ಇದು ದೇಶದ್ರೋಹಕ್ಕಿಂತ ಕಡಿಮೆಯೇ?' ಎಂದು ಅವರು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


