ಓಮೈಕ್ರಾನ್ ಆತಂಕ: ಮಧ್ಯ ಪ್ರದೇಶ ನಂತರ ಉತ್ತರ ಪ್ರದೇಶದಲ್ಲೂ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ
ಕೋವಿಡ್-19 ಹೊಸ ರೂಪಾಂತರಿ ಓಮೈಕ್ರಾನ್ ದೇಶಾದ್ಯಂತ ಹೆಚ್ಚುತ್ತಿರುವ ಕಾರಣ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 25 ರಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ.

ಲಖನೌ: ಕೋವಿಡ್-19 ಹೊಸ ರೂಪಾಂತರಿ ಓಮೈಕ್ರಾನ್ ದೇಶಾದ್ಯಂತ ಹೆಚ್ಚುತ್ತಿರುವ ಕಾರಣ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 25 ರಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ.
ರಾತ್ರಿ ಕರ್ಫ್ಯೂ ಡಿಸೆಂಬರ್ 25ರಿಂದ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ತಿಳಿಸಿದೆ.
ಇದರ ಹೊರತಾಗಿ ಮದುವೆ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ಷರತ್ತನ್ನು ಸಹ ಯೋಗಿ ಸರ್ಕಾರ ವಿಧಿಸಿದೆ. ದೇಶದಲ್ಲಿ ಓಮೈಕ್ರಾನ್ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯುಪಿ ಸರ್ಕಾರ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 122 ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಭಾರತದಲ್ಲಿ ಓಮೈಕ್ರಾನ್ ಪ್ರಕರಣ 358ಕ್ಕೆ ಏರಿದೆ. ಇದರಲ್ಲಿ 114 ಮಂದಿ ಚೇತರಿಕೆ ಕಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಇದುವರೆಗೆ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮೈಕ್ರಾನ್ ಕೋವಿಡ್ ರೂಪಾಂತರಿ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 88 ಓಮೈಕ್ರಾನ್ ಪ್ರಕರಣಗಳು ದಾಖಲಾಗಿದ್ದು, ದೆಹಲಿಯಲ್ಲಿ 67, ತೆಲಂಗಾಣ 38, ತಮಿಳುನಾಡು 34, ಕರ್ನಾಟಕ 31 ಮತ್ತು ಗುಜರಾತ್ ನಲ್ಲಿ 30 ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


