ದೇಶ

ದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಬ್ಲಾಕ್ ಮೇಲ್ ಪ್ರಯತ್ನ, ಐವರ ಬಂಧನ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಐವರನ್ನು ದೆಹಲಿ ಪೊಲೀಸರು ಬಂಧಿಸಿರುವುದಾಗಿ ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಬ್ಲಾಕ್ ಮೇಲ್ ಪ್ರಯತ್ನ, ಐವರ ಬಂಧನ
ಕೇಂದ್ರ ಸಚಿವ ಅಜಯ್ ಮಿಶ್ರಾ
Published On :

ನವದೆಹಲಿ:  ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಐವರನ್ನು ದೆಹಲಿ ಪೊಲೀಸರು ಬಂಧಿಸಿರುವುದಾಗಿ ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ವಸೂಲಿಗಾಗಿ ಕರೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನೊಯ್ಡಾದಿಂದ ನಾಲ್ವರು ಸೇರಿದಂತೆ ದೆಹಲಿಯ ಸೀರಾಸ್ ಪುರದಿಂದ ಒಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ. 

ಈ ಸಂಬಂಧ ಕೇಂದ್ರ ಸಚಿವರ ಆಪ್ತ ಸಹಾಯಕ ದೂರು ದಾಖಲಿಸಿದ್ದರು. ಹಣಕ್ಕಾಗಿ ಒತ್ತಾಯಿಸಿ ಕೆಲ ಅಪರಿಚಿತರು ತಮ್ಮಗೆ ಫೋನ್ ಕರೆ ಮಾಡಿದ್ದಾಗಿ ಅವರು ದೂರಿನಲ್ಲಿ ಆರೋಪಿಸಿದ್ದರು. ಕೇಂದ್ರ ಸಚಿವರನ್ನು ಏತಕ್ಕಾಗಿ ಬ್ಲಾಕ್ ಮಾಡಲು ಯತ್ನಿಸಲಾಯಿತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.