ರಾಜಸ್ಥಾನ: ಕೋಟಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
ಕೋಟಾದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಟಾ: ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿ ಅವಘಡದ ವೇಳೆ ಫ್ಯಾಕ್ಟರಿಯ ಆವರಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ರಶೀದ್ ಅವರು ತಿಳಿಸಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅವರು ಹೇಳಿದ್ದಾರೆ.
ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರ್ಖಾನೆಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸುಮಾರು ಶೇ. 30 ರಷ್ಟು ಬೆಂಕಿಯನ್ನು ಮಾತ್ರ ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಟಾ ಪುರಸಭೆಯ ಸಹಾಯಕ ಅಗ್ನಿಶಾಮಕ ಅಧಿಕಾರಿ ದೇವೆಂದರ್ ಗೌತಮ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


