ರಾಜಸ್ಥಾನದಲ್ಲಿ ಒಂದೇ ದಿನ 21 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳ ಪತ್ತೆ; ಒಟ್ಟಾರೆ ಸಂಖ್ಯೆ 43ಕ್ಕೆ ಏರಿಕೆ
ರಾಜಸ್ಥಾನದಲ್ಲಿ ಒಂದೇ ದಿನ 21 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳ ಪತ್ತೆಯಾಗಿದ್ದು, ಆ ಮೂಲಕ ಈ ವರೆಗೂ ಪತ್ತೆಯಾದ ಕೋವಿಡ್ ನ ಹೊಸ ರೂಪಾಂತರಿಗಳ ಸಂಖ್ಯೆ ರಾಜ್ಯದಲ್ಲಿ 43ಕ್ಕೇರಿಕೆಯಾಗಿದೆ.

ಜೈಪುರ: ರಾಜಸ್ಥಾನದಲ್ಲಿ ಒಂದೇ ದಿನ 21 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳ ಪತ್ತೆಯಾಗಿದ್ದು, ಆ ಮೂಲಕ ಈ ವರೆಗೂ ಪತ್ತೆಯಾದ ಕೋವಿಡ್ ನ ಹೊಸ ರೂಪಾಂತರಿಗಳ ಸಂಖ್ಯೆ ರಾಜ್ಯದಲ್ಲಿ 43ಕ್ಕೇರಿಕೆಯಾಗಿದೆ.
ಈ ಬಗ್ಗೆ ರಾಜಸ್ಥಾನ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜಸ್ಥಾನದಲ್ಲಿ ಇಂದು ಒಂದೇ ದಿನ ಕೋವಿಡ್-19 ಹೊಸ ರೂಪಾಂತರಿ ಒಮೈಕ್ರಾನ್ 21 ಹೊಸ ಪ್ರಕರಣಗಳು ವರದಿಯಾಗಿದೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 43ಕ್ಕೆ ಏರಿಯಾಗಿದೆ. ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಮಾದರಿಯ ಪರೀಕ್ಷೆ ನಡೆಸಿದಾಗ 21 ಮಂದಿಗೆ ಒಮೈಕ್ರಾನ್‍ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ 21 ಹೊಸ ಪ್ರಕರಣಗಳಲ್ಲಿ ಜೈಪುರವೊಂದರಲ್ಲೇ 11 ಪ್ರಕರಣಗಳಿದ್ದು, ಅಜ್ಮೀರ್ ನಿಂದ ಆರು ಮತ್ತು ಉದಯಪುರ್ ನಿಂದ ಮೂರು ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದ ಒಬ್ಬರಿಗೆ ಓಮಿಕ್ರಾನ್ ದೃಢಪಟ್ಟಿದೆ. ಈ ಸೋಂಕಿತರಲ್ಲಿ ಐವರು ವಿದೇಶದಿಂದ ಮರಳಿದವರಾಗಿದ್ದು, ಮೂವರು ವಿದೇಶಿ ಪ್ರಯಾಣಿಕರೊಂದಿಗೆ ಸಂಪರ್ಕಕ್ಕೆ ಹೊಂದಿದವರಾಗಿದ್ದಾರೆ. ರಾಜಸ್ಥಾನದಲ್ಲಿ ಸಕ್ರಿಯವಾಗಿರುವ ಕೋವಿಡ್-19 ಪ್ರಕರಣಗಳ ಸಂಖ್ಯೆ 244 ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


