ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಫಿರೋಜಾಬಾದ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಫಿರೋಜಾಬಾದ್‌ನಲ್ಲಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವೈರಲ್ ಜ್ವರದಿಂದ 45 ರಿಂದ 200 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳುತ್ತವೆ. ಆದರೆ, ಈ ಬಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ನೀವೇನಾದರೂ ಪ್ರಶ್ನಿಸಿದರೆ, ಜಿಲ್ಲೆಯ ಹೆಸರಿನಿಂದಲೇ ಜಿಲ್ಲೆಗೆ ಜ್ವರ ಬಂದಿದೆ. ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದಲೇ ಬಳಲುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ, ರಾಜ್ಯದಲ್ಲಿ ಶೇ 19ರಷ್ಟಿರುವ ಮುಸ್ಲಿಂ ಜನಸಂಖ್ಯೆಗೆ ಮತ ಚಲಾಯಿಸಲು ಮತ್ತು ತಮ್ಮದೇ ಆದ ರಾಜಕೀಯ ನಾಯಕತ್ವವನ್ನು ಆಯ್ಕೆ ಮಾಡುವ ಬಗ್ಗೆ ಪ್ರಚಾರ ಸಭೆಯಲ್ಲಿ ಓವೈಸಿ ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


