ಕೊರೋನಾ ಹೆಚ್ಚಳ: ಮುಂಬೈನಲ್ಲಿ ಹೊಸ ವರ್ಷದ ಪಾರ್ಟಿಗಳಿಗೆ ನಿಷೇಧ, ಸೆಕ್ಷನ್ 144 ಜಾರಿ
ಕೋವಿಡ್-19 ಹೊಸ ರೂಪಾಂತರಿ 'ಓಮೈಕ್ರಾನ್' ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ...

ಮುಂಬೈ: ಕೋವಿಡ್-19 ಹೊಸ ರೂಪಾಂತರಿ 'ಓಮೈಕ್ರಾನ್' ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ ಹೊಸ ವರ್ಷದ ಪಾರ್ಟಿಗಳು ಮತ್ತು ಸಭೆಗಳನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ದೇಶದ ವಾಣಿಜ್ಯ ನಗರಿಯಲ್ಲಿ ಕೋವಿಡ್ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 144ರ ಅಡಿಯಲ್ಲಿ ಉಪ ಪೊಲೀಸ್ ಆಯುಕ್ತ (ಕಾರ್ಯಾಚರಣೆ) ಎಸ್ ಚೈತನ್ಯ ಅವರು ಬುಧವಾರ ಈ ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಗುರುವಾರದಿಂದ ಜನವರಿ 7, 2022 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸ್ ಆದೇಶವು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬಾರ್‌ಗಳು, ರೆಸಾರ್ಟ್‌ಗಳು ಮತ್ತು ಕ್ಲಬ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ ಹೊಸ ವರ್ಷದ ಆಚರಣೆಗಳು, ಕಾರ್ಯಕ್ರಮಗಳು, ಸಭೆಗಳು ಮತ್ತು ಕೂಟಗಳನ್ನು ನಿಷೇಧಿಸುತ್ತದೆ.
ಬುಧವಾರ ಮುಂಬೈನಲ್ಲಿ 2,510 ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ವರದಿಯಾಗಿದ್ದು, ಇದು ಮೇ 8 ರಿಂದ ಇದುವರೆಗೆ ವರದಿಯಾದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


