ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಖಜುರಾಹೋದಲ್ಲಿ ಸನ್ಯಾಸಿ ಕಾಳಿಚರಣ್ ಮಹಾರಾಜ್ ಬಂಧನ
ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.

ರಾಯ್‌ಪುರ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತಾಗಿ ನಿಂದನಾತ್ಮಕ ಹೇಳಿಕೆ ನೀಡಿದ್ದ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್‌ಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಖಜುರಾಹೋದಲ್ಲಿದ್ದ ಕಾಳಿ ಚರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.
ರಾಯ್ ಪುರ್ ಮಾಜಿ ಮೇಯರ್ ಪ್ರಮೋದ್ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 505 (2) 294 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ರಾಯ್ ಪುರ್ ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಾಳಿಚರಣ್ ಮಹಾರಾಜ್ ಚತ್ತೀಸಘಡದಿಂದ ನಾಪತ್ತೆಯಾಗಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ: ಶಾಲೆಗಳಲ್ಲಿ ಮೊಟ್ಟೆ ನೀಡುವುದಕ್ಕೆ ಪೇಜಾವರ ಶ್ರೀ ವಿರೋಧ
ಆರೋಪಿ ಕಾಳಿಚರಣ್‌ನನ್ನು ಬಂಧಿಸಲು ಪೊಲೀಸರು ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಿಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿತ್ತು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಪೇಜಾವರ ಹಿರಿಯ ಶ್ರೀಗಳ ಬಗ್ಗೆ ಹೇಳಿಕೆ: ಹಂಸಲೇಖ ವಿಚಾರಣೆಗೆ ಹಾಜರು, ಪೊಲೀಸ್ ಠಾಣೆ ಬಳಿ ಹೈಡ್ರಾಮಾ; ಒಂದು ತಾಸಿನ ನಂತರ ನಿರ್ಗಮನ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


