ದೇಶ

ಲಾಲೂ ಹಿರಿಯ ಪುತ್ರ RJD ನಾಯಕ ತೇಜ್ ಪ್ರತಾಪ್ ಯಾದವ್ ವಿರುದ್ಧ FIR ದಾಖಲು

ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‍ನಲ್ಲಿ ಆಸ್ತಿ ವಿವರಗಳನ್ನು ಮರೆಮಾಚಿದ ಆರೋಪ ಅವರ ಮೇಲೆ ದಾಖಲಾಗಿತ್ತು.

ಲಾಲೂ ಹಿರಿಯ ಪುತ್ರ RJD ನಾಯಕ ತೇಜ್ ಪ್ರತಾಪ್ ಯಾದವ್ ವಿರುದ್ಧ FIR ದಾಖಲು
ತೇಜ್ ಪ್ರತಾಪ್ ಯಾದವ್
Published On :

ಪಾಟ್ನಾ: 2020ರ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‍ನಲ್ಲಿ ಆಸ್ತಿ ವಿವರಗಳನ್ನು ಮರೆಮಾಚಿದ ಆರೋಪದ ಮೇಲೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ ) ನಾಯಕ ತೇಜ್ ಪ್ರತಾಪ್ ಯಾದವ್ ವಿರುದ್ಧ ಎಫ್‍ ಐ ಆರ್ ದಾಖಲಾಗಿದೆ.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 (ಚಿ) ಅಡಿಯಲ್ಲಿ ಸ್ಥಿರ ಆಸ್ತಿ ವಿವರವನ್ನು ಗೌಪ್ಯವಾಗಿಟ್ಟ ಕಾರಣ ಎಫ್ ಐ ಆರ್ ದಾಖಲಾಗಿದೆ. ಈ ವಿಚಾರವಾಗಿ ಜನತಾ ದಳ (ಯುನೈಟೆಡ್) ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು. 

ಚುನಾವಣಾ ಆಯೋಗದ ಆದೇಶ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಭೂಸುಧಾರಣಾ (ಡಿ ಸಿ ಎಲ್‍ ಆರ್) ಸೂಚನೆಯ ಮೇರೆಗೆ ರೋಸೆರಾ ಉಪ ವಿಭಾಗಾಧಿಕಾರಿ (ಎಸ್‍ ಡಿ ಒ) ಬ್ರಜೇಶ್ ಕುಮಾರ್ ಆರ್‍ಜೆಡಿ ನಾಯಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಅಫಿಡವಿಟ್‍ನಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು ತೇಜ್ ಪ್ರತಾಪ್ ಯಾದವ್‍ಗೆ ಶೋಕಾಸ್ ನೋಟಿಸ್ ಕಳುಹಿಸಿತ್ತು. ತೇಜ್ ಪ್ರತಾಪ್ ಮೂರು ವಾರಗಳ ಕಾಲಾವಕಾಶದೊಳಗೆ ಉತ್ತರಿಸುವಂತೆ ಕೇಳಿಕೊಂಡಿತ್ತು. ನಿಗದಿತ ಕಾಲಾವಧಿಯೊಳಗೆ ಪ್ರತಿಕ್ರಿಯಿಸಲು ವಿಫಲರಾದ ಕಾರಣ ಅವರ ವಿರುದ್ಧ ಎಫ್‍ ಐ ಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.