ಮಧ್ಯ ಪ್ರದೇಶದಲ್ಲಿ ಉದ್ಯೋಗಕ್ಕೆ ಬರ: ಗುಮಾಸ್ತ ಕೆಲಸಕ್ಕೆ ಮುಗಿಬಿದ್ದ ಬಿಟೆಕ್, ಎಂಬಿಎ ಪದವೀಧರರು!
ಮಧ್ಯ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ಯುವಕರನ್ನು ತೀವ್ರವಾಗಿ ಕಾಡುತ್ತಿದ್ದು, ಡಿ ದರ್ಜೆಯ ಗುಮಾಸ್ತ ಹುದ್ದೆಗಾಗಿ ಸ್ನಾತ್ತಕೋತ್ತರ ಪದವೀದರರು ಸಹ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಭೂಪಾಲ್: ಮಧ್ಯ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ಯುವಕರನ್ನು ತೀವ್ರವಾಗಿ ಕಾಡುತ್ತಿದ್ದು, ಡಿ ದರ್ಜೆಯ ಗುಮಾಸ್ತ ಹುದ್ದೆಗಾಗಿ ಸ್ನಾತ್ತಕೋತ್ತರ ಪದವೀದರರು ಸಹ ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಕೊರೋನಾ ಬಿಕ್ಕಟ್ಟಿನಿಂದಾಗಿ ಅನೇಕ ಮಂದಿ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದರಿಂದ ಉದ್ಯೋಗ ಭದ್ರತೆ ಹೊಂದಿರುವ ಸರ್ಕಾರಿ ಉದ್ಯೋಗಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಗುಮಾಸ್ತ ಕೆಲಸಕ್ಕಾಗಿ ಸ್ನಾತ್ತಕೋತ್ತರ ಪದವೀಧರರು, ಪಿಎಚ್ ಡಿ ಮಾಡಿರುವವರು ಸಹ ಅರ್ಜಿ ಸಲ್ಲಿಸಿದ್ದಾರೆ.
ಗ್ವಾಲಿಯರ್ ಜಿಲ್ಲಾ ನ್ಯಾಯಾಲಯದಲ್ಲಿ 15 ಪ್ಯೂನ್, ಗಾರ್ಡಿನರ್, ಡ್ರೈವರ್ ಹಾಗೂ ಸ್ಲೀಪರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 11,000 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಪ್ಯೂನ್, ಗಾರ್ಡಿನರ್ ಹಾಗೂ ಸ್ಲೀಪರ್ ಉದ್ಯೋಗಗಳಿಗೆ 8ನೇ ತರಗತಿ ಉತ್ತೀರ್ಣಗೊಂಡವರು ಆರ್ಹರು. ಡ್ರೈವರ್ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು ಆದರೆ, ಸಂದರ್ಶನದ ಸಾಲಿನಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರೇ ಹೆಚ್ಚು ಇದ್ದಾರೆ. ಅರ್ಜಿ ಸಲ್ಲಿಸಿದವರಲ್ಲಿ ಬಿಟೆಕ್, ಎಂಬಿಎ, ಪಿಎಚ್‌ಡಿ ಮಾಡಿದವರೂ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


