ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆ
ವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ವಾರಣಾಸಿ: ವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ವಿದ್ಯಾರ್ಥಿಯಾಗಿದ್ದ ದಿನಗಳಿಂದಲೂ ಸಮಾಜವಾದಿ ಸಿದ್ಧಾಂತಗಳ ಅನುಯಾಯಿಯಾಗಿದ್ದ ಶತರುದ್ರ ಪ್ರಕಾಶ್ ಡಿ.31 ರಂದು ರಾಜ್ಯ ಬಿಜೆಪಿ ಘಟಕದ ಮುಖ್ಯಾಸ್ಥರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬನಾರಸ್ ಹಿಂದೂ ವಿವಿ (ಬಿಹೆಚ್ ಯು) ನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳಲ್ಲೇ ರಾಜಕೀಯ ಕ್ಷೇತ್ರದತ್ತ ಒಲವು ಹೊಂದಿದ್ದರು 1974 ರಲ್ಲಿ ಮೊದಲ ಬಾರಿಗೆ ವಾರಣಾಸಿ ಕಂಟೋನ್ಮೆಂಟ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ವಿಧಾನಸಭೆಗೆ ಪ್ರವೇಶಿಸಿದ್ದರು.
ಮೂರು ವರ್ಷಗಳ ಬಳಿಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಗೆದ್ದಿದ್ದರು ಶತರುದ್ರಪ್ರಕಾಶ್
1985 ರಲ್ಲಿ ಲೋಕದಳದಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದ ಅವರು 1989 ರಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದರು. ಮುಲಾಯಂ ಸಿಂಗ್ ಯಾದವ್ ಸಚಿವ ಸಂಪುಟದಲ್ಲಿ ಮಂತ್ರಿಯಾಗಿಯೂ ಅವರು ಕಾರ್ಯನಿರ್ವಹಣೆ ಮಾಡಿದ್ದಾರೆ.
ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವೇಳೆ ಶತರುದ್ರ ಪ್ರಕಾಶ್ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇತ್ತೀಚಿನ ಚಳಿಗಾಲದ ಅಧಿವೇಶನದಲ್ಲಿ ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟನೆಯಾಗಿದ್ದಕ್ಕೆ ವಿಧಾನ ಪರಿಷತ್ ನಲ್ಲಿ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


