ಹಣಕಾಸು ಸಚಿವರು 2020ರಲ್ಲಿ ನಾಲ್ಕೈ ದು ಮಿನಿ ಬಜೆಟ್ ಕೊಟ್ಟಿದ್ದರು, ಈ ಬಾರಿ ಅದರ ಮುಂದುವರಿದ ಭಾಗ: ಪ್ರಧಾನಿ ಮೋದಿ
ಈ ದಶಕದ ಮೊದಲ ಸಂಸತ್ತು ಅಧಿವೇಶನ ಆರಂಭವಾಗುತ್ತಿದೆ. ಭವ್ಯ ಭಾರತದ ಭವಿಷ್ಯಕ್ಕೆ ಈ ಶತಮಾನ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸನ್ನು ಈಡೇರಿಸಲು ದೇಶದ ನಾಗರಿಕರ ಮುಂದೆ ಒಂದು ಸುವರ್ಣ ಅವಕಾಶ ಸಿಕ್ಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಈ ದಶಕದ ಮೊದಲ ಸಂಸತ್ತು ಅಧಿವೇಶನ ಆರಂಭವಾಗುತ್ತಿದೆ. ಭವ್ಯ ಭಾರತದ ಭವಿಷ್ಯಕ್ಕೆ ಈ ಶತಮಾನ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸನ್ನು ಈಡೇರಿಸಲು ದೇಶದ ನಾಗರಿಕರ ಮುಂದೆ ಒಂದು ಸುವರ್ಣ ಅವಕಾಶ ಸಿಕ್ಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಸದನಕ್ಕೆ ಪ್ರವೇಶಿಸುವ ಮೊದಲು ನರೇಂದ್ರ ಮೋದಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದರು. ಈ ದಶಕವನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಬೇಕು. ಇದನ್ನು ಮನಸ್ಸಿನಲ್ಲಿಟ್ಟುಕೊಂಡು ದಶಕವನ್ನು ಮುಖ್ಯವಾಗಿ ಕೇಂದ್ರೀಕರಿಸಿಕೊಂಡು ಸದನದಲ್ಲಿ ಚರ್ಚೆ ನಡೆಯಬೇಕು. ಅದನ್ನು ದೇಶ ನಿರೀಕ್ಷೆ ಮಾಡುತ್ತಿದೆ. ಜನರ ಆಶೋತ್ತರಗಳನ್ನು ಈಡೇರಿಸಲು ನಮ್ಮ ಕೊಡುಗೆ ಸಲ್ಲಿಸುವುದರಲ್ಲಿ ನಾವು ಹಿಂದೇಟು ಹಾಕಬಾರದು ಎಂದು ಹೇಳಿದರು.
ಬಜೆಟ್ ಅಧಿವೇಶನ: ಇದು ಬಜೆಟ್ ಅಧಿವೇಶನ,ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಕಳೆದ ವರ್ಷ ಹಣಕಾಸು ಸಚಿವರು ವಿವಿಧ ಪ್ಯಾಕೇಜ್ ಗಳಡಿಯಲ್ಲಿ 4ರಿಂದ 5 ಮಿನಿ ಬಜೆಟ್ ಗಳನ್ನು ಮಂಡಿಸಿದ್ದರು. ಈ ಬಾರಿಯ ಬಜೆಟ್ ಆ ನಾಲ್ಕೈದು ಬಜೆಟ್ ಗಳ ಮುಂದುವರಿದ ಭಾಗವಾಗಿರುತ್ತದೆ ಎಂದು 2021ನೇ ಸಾಲಿನ ಬಜೆಟ್ ನ ಸುಳಿವು ನೀಡಿದರು.
ಈ ಮಧ್ಯೆ, ಬಜೆಟ್ ಅಧಿವೇಶನವು ಹಲವು ದೃಶ್ಯಗಳಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ, ವಿರೋಧ ಪಕ್ಷಗಳು ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ರೈತರ ಪ್ರತಿಭಟನೆ, ಆರ್ಥಿಕ ಹಿಂಜರಿತ, ಉದ್ಯೋಗ ನಷ್ಟ, ಸಿಒವಿಐಡಿ ಬಿಕ್ಕಟ್ಟನ್ನು ನಿಭಾಯಿಸುವುದು ಮತ್ತು ಚೀನಾದೊಂದಿಗೆ ಎಲ್ಎಸಿ ನಿಲುವು ಮುಂತಾದ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳು ಕಾಯುತ್ತಾ ಕುಳಿತಿವೆ.
ಕಾಂಗ್ರೆಸ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ, ನ್ಯಾಷನಲ್ ಕಾನ್ಫರೆನ್ಸ್, ದ್ರಾವಿಡ ಮುನ್ನೇತ್ರ ಕಳಗಂ, ತೃಣಮೂಲ ಕಾಂಗ್ರೆಸ್, ಶಿವಸೇನೆ, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ), ಸಿಪಿಐ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆರ್ಎಸ್ಪಿ , ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ಎಂಡಿಎಂಕೆ, ಕೇರಳ ಕಾಂಗ್ರೆಸ್ (ಎಂ) ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ಶಿರೋಮಣಿ ಅಕಾಲಿ ದಳ ಮತ್ತು ಆಮ್ ಆದ್ಮಿ ಪಕ್ಷವೂ ಪ್ರತ್ಯೇಕವಾಗಿ ಇಂದಿನ ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿವೆ. ಸಂಸತ್ತಿನಲ್ಲಿ 20 ಕ್ಕೂ ಹೆಚ್ಚು ವಿರೋಧ ಪಕ್ಷಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


