ಸಿಎಂ ಉದ್ಧವ್ ಠಾಕ್ರೆ ಜೊತೆ ಅಭಿವೃದ್ಧಿ ವಿಷಯಗಳ ಚರ್ಚೆಯಾಗಿದೆ ಹೊರತು ರಾಜಕೀಯವಲ್ಲ: ಶರದ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆಗಿನ ಸಭೆಯಲ್ಲಿ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೇಗೆ ತ್ವರಿತಗೊಳಿಸುವುದು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಹೊರತು ರಾಜಕೀಯ ವಿಷಯವನಲ್ಲ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳಬಾರದು ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆಗಿನ ಸಭೆಯಲ್ಲಿ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೇಗೆ ತ್ವರಿತಗೊಳಿಸುವುದು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಹೊರತು ರಾಜಕೀಯ ವಿಷಯವನಲ್ಲ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳಬಾರದು ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, 'ಇಲ್ಲಿ ಯಾವುದೇ ರಾಜಕೀಯ ವಿಷಯ ಚರ್ಚೆಯಾಗಿಲ್ಲ. ಅಭಿವೃದ್ಧಿ ಕುರಿತಂತೆ ಕೆಲವು ನಿರ್ಧಾರಗಳನ್ನು ವೇಗವಾಗಿ ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂಬುದು ನಮ್ಮ ಅಭಿಪ್ರಾಯ. ಮುಖ್ಯಮಂತ್ರಿಯವರೊಂದಿಗಿನ ನನ್ನ ಸಭೆ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೇಗೆ ತ್ವರಿತಗೊಳಿಸುವುದು ಎಂಬುದರ ಕುರಿತು ಚರ್ಚಿಸಲಾಗಿದೆ ಎಂದರು.
ಶಿವಸೇನೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಪ್ರಮುಖ ಪಕ್ಷವಾಗಿರುವ ಎನ್‌ಸಿಪಿ ನಾಯಕ ಶರದ್ ಪವಾರ್, ಸಮ್ಮಿಶ್ರ ಸರ್ಕಾರ ನಡುವಿನ ಭಿನ್ನಾಭಿಪ್ರಾಯಗಳ ಬಗ್ಗೆ ರಾಜಕೀಯ ವಲಯಗಳಲ್ಲಿ ಊಹಾಪೋಹಗಳು ಚರ್ಚೆಯಾಗುವ ಎರಡು ದಿನಗಳ ಹಿಂದೆ ಠಾಕ್ರೆ ಅವರನ್ನು ಭೇಟಿ ಮಾಡಿದ್ದರು. ವಿಭಿನ್ನ ಸಿದ್ಧಾಂತಗಳನ್ನು ಹೊಂದಿರುವ ಪಕ್ಷಗಳ ಒಕ್ಕೂಟವಾದ ಎಂವಿಎದಲ್ಲಿ ಕಾಂಗ್ರೆಸ್ ಮೂರನೇ ಪಾಲುದಾರ ಪಕ್ಷವಾಗಿದೆ.
ಎಂವಿಎಯಿಂದ ಹಿಂದೆ ಸರಿಯುವಂತೆ ಎನ್‌ಸಿಪಿ ಮೇಲೆ ಒತ್ತಡವಿದೆ. ಅಲ್ಲದೆ ಪವಾರ್ ಕುಟುಂಬಕ್ಕೆ ಸೇರಿದ ಹಲವಾರು ಸಂಸ್ಥೆಗಳಿಗೆ ಇಡಿ ನೋಟಿಸ್ ನೀಡುತ್ತಿದೆ ಎಂಬ ಊಹಾಪೋಹಗಳಿಗೆ 80 ವರ್ಷದ ಮಾಜಿ ಕೇಂದ್ರ ಕೃಷಿ ಸಚಿವರು ನಿರಾಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


