ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,786 ಹೊಸ ಪ್ರಕರಣ; 1,005 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮೊನ್ನೆಗಿಂತ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. 48,786 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,005 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,786 ಹೊಸ ಪ್ರಕರಣ; 1,005 ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮೊನ್ನೆಗಿಂತ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. 48,786 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,005 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಪ್ರಸಕ್ತ ಒಟ್ಟು ಸೋಂಕಿತರ ಸಂಖ್ಯೆ 5 ಲಕ್ಷದ 23 ಸಾವಿರದ 257ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3 ಲಕ್ಷದ 99 ಸಾವಿರದ 459ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆದೇಶದಲ್ಲಿ 5 ಲಕ್ಷದ 23 ಸಾವಿರದ 257 ಆಗಿದೆ.

ಕಳೆದ 24 ಗಂಟೆಗಳಲ್ಲಿ 61 ಸಾವಿರದ 588 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2 ಕೋಟಿಯ 94 ಲಕ್ಷದ 88 ಸಾವಿರದ 918ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ನಿನ್ನೆ 19 ಲಕ್ಷದ 21 ಸಾವಿರದ 450 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ 41 ಕೋಟಿಯ 20 ಲಕ್ಷದ 21 ಸಾವಿರದ 494 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.