ಧಾರ್ಮಿಕ ಮತಾಂತರ ಪ್ರಕರಣ: ದೆಹಲಿ, ಉತ್ತರ ಪ್ರದೇಶಗಳಲ್ಲಿ ಇ.ಡಿ ದಾಳಿ
ವಿದೇಶಗಳಿಂದ ಹಣ ಪಡೆದು ಶ್ರವಣ ದೋಷವುಳ್ಳ ವಿದ್ಯಾರ್ಥಿಗಳು ಹಾಗೂ ಬಡವರನ್ನು ಇಸ್ಲಾಮ್ ಗೆ ಮತಾಂತರಗೊಳಿಸುತ್ತಿದ್ದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಉತ್ತರ ಪ್ರದೇಶ, ದೆಹಲಿಗಳಲ್ಲಿ ದಾಳಿ ನಡೆಸಿದೆ.

ನವದೆಹಲಿ: ವಿದೇಶಗಳಿಂದ ಹಣ ಪಡೆದು ಶ್ರವಣ ದೋಷವುಳ್ಳ ವಿದ್ಯಾರ್ಥಿಗಳು ಹಾಗೂ ಬಡವರನ್ನು ಇಸ್ಲಾಮ್ ಗೆ ಮತಾಂತರಗೊಳಿಸುತ್ತಿದ್ದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಉತ್ತರ ಪ್ರದೇಶ, ದೆಹಲಿಗಳಲ್ಲಿ ದಾಳಿ ನಡೆಸಿದೆ.
6 ಪ್ರದೇಶಗಳಲ್ಲಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ಬೇಧಿಸಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.
ಎಟಿಎಸ್ ನಿಂದ ಬಂಧನಕ್ಕೊಳಗಾಗಿದ್ದ ಇಬ್ಬರು ಪುರುಷರು, ದೆಹಲಿಯ ಜಾಮಿಯಾ ನಗರದ ಇಸ್ಲಾಮಿಕ್ ದವಾಹ್ ಕೇಂದ್ರ ಎಂಬ ಸಂಘಟನೆಯನ್ನು ನಡೆಸುತ್ತಿದ್ದರು. ಈ ಸಂಘಟನೆಯ ಮೂಲಕ ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟಲಿಜೆನ್ಸ್ ಮತ್ತು ಇತರ ವಿದೇಶಿ ಏಜೆನ್ಸಿಗಳ ಮೂಲಕ ಆರ್ಥಿಕ ನೆರವನ್ನು ಪಡೆದು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಬಂಧಿತರನ್ನು
ಮುಫ್ತಿ ಖಾಜಿ ಜಹಾಂಗೀರ್ ಆಲಂ ಕಸ್ಮಿ ಮತ್ತು ಮೊಹಮ್ಮದ್ ಉಮರ್ ಗೌತಮ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


