ಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಭೇಟಿ ಮಾಡಿದ ನಿಯೋಜಿತ ಸಿಎಂ ಪುಷ್ಕರ್ ಸಿಂಗ್ ಧಮಿ
ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಪದಗ್ರಹಣಕ್ಕೆ ವೇದಿಕೆ ಸಿದ್ದವಾಗಿದ್ದು ಭಾನುವಾರ ಸಾಯಂಕಾಲ ಪ್ರಮಾಣವಚನಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಪದಗ್ರಹಣಕ್ಕೆ ವೇದಿಕೆ ಸಿದ್ದವಾಗಿದ್ದು ಭಾನುವಾರ ಸಾಯಂಕಾಲ ಪ್ರಮಾಣವಚನಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದ ಧಮಿ, ಕೆಲ ಹೊತ್ತು ಮಾತುಕತೆ ನಡೆಸಿದರು.
ನಿನ್ನೆ ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷ ಧಮಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಿತ್ತು. ಖಾತಿಮ ಕ್ಷೇತ್ರದಿಂದ ಧಮಿಯವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಾಂವಿಧಾನಿಕ ವಿಚಾರಗಳ ಹಿನ್ನೆಲೆಯಲ್ಲಿ ಮೊನ್ನೆ ಶುಕ್ರವಾರ ಸಾಯಂಕಾಲ ತಿರಂತ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


