ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅಧಿಕಾರ ಸ್ವೀಕಾರ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಡೆಹ್ರಾಡೂನ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.
ಪುಷ್ಕರ್ ಸಿಂಗ್ ಧಮಿ ಕಾಟಿಮಾ ಕ್ಷೇತ್ರದಿಂದ ಎರಡು ಶಾಸಕರಾಗಿದ್ದರೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರಲಿಲ್ಲ ಆದರೆ, ಧಮಿ ಉತ್ತರಾಖಂಡ ರಾಜ್ಯದ ಕಿರಿಯ ವಯಸ್ಸಿನ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ.
ಸುಮಾರು ನಾಲ್ಕು ತಿಂಗಳ ಅವಧಿಯಲ್ಲಿ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿರುವ ಧಮಿ, ಶನಿವಾರ ಉತ್ತರಾಖಂಡ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆಯಾಗಿದ್ದರು.
ಮಾಜಿ ಸೈನಿಕನ ಮಗನಾಗಿರುವ ಪುಷ್ಕರ್ ಸಿಂಗ್ ಧಮಿ, ಕಾನೂನು ವಿಷಯದಲ್ಲಿ ಪದವಿ ಪೂರೈಸಿದ್ದು, ಆರ್ ಎಸ್ ಎಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಉತ್ತರಾಖಂಡ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ 2002 ಮತ್ತು 2008ರಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


