ದೇಶ

ಕೋವಿಡ್-19: ಕರ್ನಾಟಕ, ಕೇರಳ ಪ್ರವಾಸಿಗರು ತಮಿಳುನಾಡಿನ ನೀಲಗಿರಿ ಜಿಲ್ಲೆ ಪ್ರವೇಶಿಸಲು ಇ-ಪಾಸ್ ಕಡ್ಡಾಯ!

ಕೇರಳ ಮತ್ತು ಕರ್ನಾಟಕದಿಂದ ಬರುವ ಪ್ರವಾಸಿಗರು ಮತ್ತು ಸಾರ್ವಜನಿಕರು ತಮಿಳುನಾಡಿನ ನೀಲಗಿರಿ ಜಿಲ್ಲೆಗೆ ಪ್ರವೇಶಿಸಲು ಇ-ಪಾಸ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಜೆ ಇನ್ನೊಸೆಂಟ್ ದಿವ್ಯಾ ಸೋಮವಾರ ಹೇಳಿದರು.

ಕೋವಿಡ್-19: ಕರ್ನಾಟಕ, ಕೇರಳ ಪ್ರವಾಸಿಗರು ತಮಿಳುನಾಡಿನ ನೀಲಗಿರಿ ಜಿಲ್ಲೆ ಪ್ರವೇಶಿಸಲು ಇ-ಪಾಸ್ ಕಡ್ಡಾಯ!
ನೀಲಗಿರಿ ಜಿಲ್ಲೆ
Published On :

ಉದಕಮಂಡಲಂ: ಕೇರಳ ಮತ್ತು ಕರ್ನಾಟಕದಿಂದ ಬರುವ ಪ್ರವಾಸಿಗರು ಮತ್ತು ಸಾರ್ವಜನಿಕರು ತಮಿಳುನಾಡಿನ ನೀಲಗಿರಿ ಜಿಲ್ಲೆಗೆ ಪ್ರವೇಶಿಸಲು ಇ-ಪಾಸ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಜೆ ಇನ್ನೊಸೆಂಟ್ ದಿವ್ಯಾ ಸೋಮವಾರ ಹೇಳಿದರು. 

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದ ನಂತರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಸ್ಥಳಗಳನ್ನು ತೆರೆಯುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜೆ ಇನ್ನೊಸೆಂಟ್ ದಿವ್ಯಾ ಮಾಹಿತಿ ನೀಡಿದರು.

65 ಲಕ್ಷ ರೂ.ಗಳ ರೂಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಸ್ಮಾರಕ ಹೆರಿಗೆ ಆಸ್ಪತ್ರೆಯ ಉದ್ಘಾಟನೆ ವೇಳೆ ಅವರು ಮಾತನಾಡಿದ್ದು, ಕೋವಿಡ್-19 ನಿರ್ಬಂಧಗಳಲ್ಲಿ ವಿನಾಯಿತಿ ಘೋಷಿಸುವುದರಿಂದ 11 ನಿರ್ದಿಷ್ಟ ಜಿಲ್ಲೆಗಳಲ್ಲಿ ಪ್ರಯಾಣದಂತಹ ಉದ್ದೇಶಗಳಿಗಾಗಿ ಇ-ಪಾಸ್ ಕಡ್ಡಾಯ ನಿರ್ಣಯವನ್ನು ಸರ್ಕಾರ  ತೆಗೆದುಕೊಂಡಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.