ದೇಶ

ಆರೋಗ್ಯ ಸ್ಥಿತಿ ಗಂಭೀರ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಐಸಿಯುನಲ್ಲಿ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಚಿಕಿತ್ಸೆಗಾಗಿ ಭಾನುವಾರ ಸಂಜೆ ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ.

ಆರೋಗ್ಯ ಸ್ಥಿತಿ ಗಂಭೀರ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಐಸಿಯುನಲ್ಲಿ
ಕಲ್ಯಾಣ್ ಸಿಂಗ್
Published On :

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಚಿಕಿತ್ಸೆಗಾಗಿ ಭಾನುವಾರ ಸಂಜೆ ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ. 

ಆಸ್ಪತ್ರೆಯ ಪ್ರಕಟಣೆಯ ಪ್ರಕಾರ, ಹೃದ್ರೋಗ, ಮೂತ್ರಪಿಂಡ ಶಾಸ್ತ್ರ, ನರವಿಜ್ಞಾನ ಸೇರಿದಂತೆ ಹಲವು ವಿಭಾಗಗಳ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ತಜ್ಞ ವೈದ್ಯರು ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ.

ರಾಜಸ್ಥಾನದ ಮಾಜಿ ರಾಜ್ಯಪಾಲ, ಬಿಜೆಪಿ ಮುಖಂಡ ಕಲ್ಯಾಣ್‌ ಸಿಂಗ್‌, ಕಳೆದ ಎರಡು ವಾರಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಂಜೆ 5:30ರ ಸುಮಾರಿಗೆ ಅವರು ಸಂಜಯ್‌ ಗಾಂಧಿ ಇನ್‌ಸ್ಟಿಟ್ಯೂಟ್‌ನ ಐಸಿಯುಗೆ ದಾಖಲಾಗಿದ್ದಾರೆ. 'ರಕ್ತದೊತ್ತಡ ಮತ್ತು ಹೃದಯ ಬಡಿತ ಸಹಜವಾಗಿದೆ, ಆದರೆ ಪ್ರಜ್ಞೆ ಕ್ಷೀಣಿಸಿದೆ' ಎಂದು
ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.