ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಿರಲು ಕೇಂದ್ರದ ಭರವಸೆ: ದುರೈ ಮುರುಗನ್
ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಹೇಳಿದ್ದಾರೆ.

ನವದೆಹಲಿ: ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಮತ್ತು ಪೆನ್ನಿಯಾರ್ ಜಲಾನಯನ ಪ್ರದೇಶದ ಮಾರ್ಕಂಡೇಯ ನದಿಯ ಮೇಲಿರುವ ಅಣೆಕಟ್ಟಿನ ಬಗ್ಗೆ ತನಿಖೆ ನಡೆಸಲು ನ್ಯಾಯಮಂಡಳಿ ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಿಳಿಸಿದ್ದಾರೆ.
ಕೇಂದ್ರ ಸಚಿವರೊಂದಿಗಿನ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದುರೈ ಮುರುಗನ್, ಕಾವೇರಿ-ಗುಂಡಾರು ನದಿ ಜೋಡಣೆ ಯೋಜನೆಗೆ ಹಣ ಹಂಚಿಕೆಗೆ ಬೇಡಿಕೆ ಇಟ್ಟಿರುವುದಾಗಿ ತಿಳಿಸಿದರು.
ತಮಿಳುನಾಡಿನ ಜಲಸಂಪನ್ಮೂಲಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಬೇಡಿಕೆಗಳಿಗೆ ಸಂಬಂಧಿಸಿದ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಿರುವ ದುರೈ ಮುರುಗನ್, ಸುಪ್ರೀಂಕೋರ್ಟ್ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿಗದಿಪಡಿಸಿರುವಂತೆ ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು, ಬಿಳಿಗುಂಡ್ಲುವಿನಲ್ಲಿ ನೀರಿನ ನೈಜತೆ ಅರಿಯಲು ಸೂಕ್ತ ಕ್ರಮ ಕೈಗೊಳ್ಳಬೇಕು, ಸಿಡಬ್ಲ್ಯುಎಂಎ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಸಂಪೂರ್ಣ ಅವಧಿಯ ಅಧ್ಯಕ್ಷರನ್ನು ಶೀಘ್ರವಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದಾಗಿ ಹೇಳಿದರು.
ಸಭೆಯಲ್ಲಿ ತಮಿಳುನಾಡು ಸರ್ಕಾರದ ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಚಟುವಟಿಕೆಯನ್ನು ಕೈಗೊಳ್ಳದಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಮಾರ್ಕಂಡೇಯ ಜಲಾಶಯಕ್ಕೆ ಸಂಬಂಧಿಸಿದಂತೆ ನ್ಯಾಯ ಮಂಡಳಿ ರಚಿಸುವಂತೆ, ಪೆನ್ನೈಯರ್ ಜಲಾನಯನ ಪ್ರದೇಶದಲ್ಲಿ ನಡೆಯುತ್ತಿರುವ ಎಲ್ಲಾ ಕೆಲಸಗಳನ್ನು ನಿಲ್ಲಿಸುವಂತೆ ಕರ್ನಾಟಕಕ್ಕೆ ಸಲಹೆ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ದುರೈ ಮುರುಗನ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


