ಹೊಸ ಐಟಿ ನಿಯಮಗಳ ಮಾನ್ಯತೆ ಪ್ರಶ್ನಿಸಲಾದ ಹೈ ಕೋರ್ಟ್ ಅರ್ಜಿಗಳ ವರ್ಗಾವಣೆಗೆ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ
ನೂತನ ಐಟಿ ನಿಯಮಗಳ ಮಾನ್ಯತೆಯನ್ನು ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್ ಗಳಲ್ಲಿ ಬಾಕಿಯಿರುವ ಅರ್ಜಿಗಳ ವರ್ಗಾವಣೆ ಕೋರಿ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ನವದೆಹಲಿ: ನೂತನ ಐಟಿ ನಿಯಮಗಳ ಮಾನ್ಯತೆಯನ್ನು ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್ ಗಳಲ್ಲಿ ಬಾಕಿಯಿರುವ ಅರ್ಜಿಗಳ ವರ್ಗಾವಣೆ ಕೋರಿ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ದೆಹಲಿ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್ ಗಳಲ್ಲಿ ನೂತನ ಐಟಿ ನಿಯಮಗಳು 2021 ಪ್ರಶ್ನಿಸಿ ಅನೇಕ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹಿರಿಯ ಕಾನೂನು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಹೈಕೋರ್ಟ್‌ನಲ್ಲಿ ಬಾಕಿ ಇರುವ ಅರ್ಜಿಗಳು ಸಾಮಾಜಿಕ ಮಾಧ್ಯಮ ಸಂಸ್ಥೆಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಒಟಿಟಿ ಪ್ಲೇಯರ್ಸ್ ನಿಯಂತ್ರಿಸುವ ಉದ್ದೇಶದ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿವೆ.
ಆಡಳಿತ ಸಂಸ್ಥೆಗಳು ಮತ್ತು ನ್ಯಾಯಾಲಯಗಳಿಂದ ಬರುವ ಆನ್ ಲೈನ್ ವಿಷಯಗಳನ್ನು ಪರಿಹರಿಸಲು ದೇಶದಲ್ಲಿ ನೆಲೆಸಿರುವ ಅಧಿಕಾರಿಯೊಂದಿಗೆ ದೂರು ಪರಿಹಾರ ವ್ಯವಸ್ಥೆಯನ್ನು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಜಾರಿಗೆ ತರಬೇಕಾಗುತ್ತದೆ.
ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನು ಯಾವಾಗ ನೇಮಕ ಮಾಡಬೇಕೆಂದು ಜುಲೈ 8 ರೊಳಗೆ ತಿಳಿಸುವಂತೆ ದೆಹಲಿ ಹೈಕೋರ್ಟ್ ಟ್ವಿಟರ್‌ಗೆ ಇಂದು ಬೆಳಗ್ಗೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


