ಕಳೆದ 111 ದಿನಗಳಲ್ಲಿ ದೇಶದಲ್ಲಿ ಇಂದು ಅತಿ ಕಡಿಮೆ ಕೊರೋನಾ ಸೋಂಕು: 34,703 ಹೊಸ ಕೇಸು, 553 ಸಾವು
ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34,703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 6 ಲಕ್ಷದ 19 ಸಾವಿರದ 932 ಆಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34,703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 6 ಲಕ್ಷದ 19 ಸಾವಿರದ 932 ಆಗಿದೆ. ಕಳೆದ 111 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಸೋಂಕಿನ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 553 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 4 ಲಕ್ಷದ 03 ಸಾವಿರದ 281ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 4 ಲಕ್ಷದ 64 ಸಾವಿರದ 357 ಇದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 51 ಸಾವಿರದ 864 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2 ಕೋಟಿಯ 97 ಲಕ್ಷದ 52 ಸಾವಿರದ 294ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 16 ಲಕ್ಷದ 47 ಸಾವಿರದ 424 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 42 ಕೋಟಿಯ 14 ಲಕ್ಷದ 24 ಸಾವಿರದ 881 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಇದುವರೆಗೆ 37 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲಿ 23 ಲಕ್ಷದ 80 ಸಾವಿರಕ್ಕೂ ಅಧಿಕ ಡೋಸ್ ಲಸಿಕೆಯನ್ನು ಒದಗಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ ಜೂನ್ 21ರಿಂದ ಆರಂಭವಾದ ಕೋವಿಡ್ ಲಸಿಕೆ ಸಾರ್ವತ್ರಿಕ ಅಭಿಯಾನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಒದಗಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


