ಕೇಂದ್ರ ಸಚಿವ ಸಂಪುಟ ವಿಸ್ತರಣೆ ವದಂತಿ: ಸಂಪುಟದ ಹಿರಿಯ ಸಚಿವರುಗಳ ಜೊತೆಗಿನ ಪ್ರಧಾನಿ ಮೋದಿ ಸಭೆ ರದ್ದು
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿರುವ ವದಂತಿಗಳ ಮಧ್ಯೆ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ.

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿರುವ ವದಂತಿಗಳ ಮಧ್ಯೆ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ.
ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಪ್ರಸ್ತಾವನೆಗಳ ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿತ್ತು ಎನ್ನಲಾಗಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಲ್ಹಾದ್ ಜೋಷಿ, ಪಿಯೂಷ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು.
ನಿನ್ನೆ ಪ್ರಧಾನಿ ಮೋದಿ ಅವರು ಅಮಿತ್ ಶಾ ಹಾಗೂ ಬಿಜೆಪಿ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಜೂನ್ 20ರಿಂದಲೂ ಪ್ರಧಾನಿ ಮೋದಿ, ವಿವಿಧ ಸಚಿವಾಲಯಗಳ ಕಾರ್ಯವೈಖರಿ, ಪ್ರದರ್ಶನಗಳ ಪರಾಮರ್ಶನಾ ಸಭೆಗಳನ್ನು ನಡೆಸುತ್ತಾ ಬಂದಿದ್ದಾರೆ. ಸಂಪುಟ ವಿಸ್ತರಣೆಗೆ ಈಗಾಗಲೇ ಪೂರ್ವಭಾವಿ ಸಿದ್ದತೆಗಳು ಮುಗಿದಿವೆ.
ಕೇಂದ್ರದಲ್ಲಿ ಹಲವು ಸಚಿವ ಹುದ್ದೆಗಳು ಖಾಲಿಯಿದ್ದು ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಲೇ ಇದೆ. ಇನ್ನೆರಡು ದಿನ ಕಳೆದು ಸಭೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


