ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಹಿನ್ನೆಲೆ ಅಮರಿಂದರ್ ಸಿಂಗ್- ಸೋನಿಯಾ ಗಾಂಧಿ ಭೇಟಿ
ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದ ಹಿನ್ನೆಲೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದ ಹಿನ್ನೆಲೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆ ಸನಿಹದಲ್ಲಿದ್ದು, ರಾಜ್ಯ ಘಟಕದಲ್ಲಿ ಹೆಚ್ಚಾಗುತ್ತಿರುವ ಬಣ ರಾಜಕೀಯವನ್ನು ತಹಬದಿಗೆ ತರಲು ಹೈಕಮಾಂಡ್ ನಾಯಕರು ಯತ್ನಿಸುತ್ತಿದ್ದಾರೆ.
ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಸಿಎಂ ಅಮರಿಂದರ್ ಸಿಂಗ್ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದು ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.
ಪಂಜಾಬ್ ಕಾಂಗ್ರೆಸ್ ನಲ್ಲಿ ಬಣ ರಾಜಕೀಯವನ್ನು ಕೊನೆಗಾಣಿಸಲು ಎಲ್ಲಾ ವರ್ಗ, ಜಾತಿಗಳಿಗೂ ಪಕ್ಷ, ಸಂಪುಟದಲ್ಲಿ ಸ್ಥಾನ ನೀಡುವ ಸೂತ್ರವನ್ನು ಅಮರಿಂದರ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಚರ್ಚಿಸಿದ್ದಾರೆ. ಪಂಜಾಬ್ ಚುನಾವಣೆಗೆ ಇನ್ನು ಕೆಲವೇ ತಿಂಗಳ ಸಮಯವಿದೆ.
ಕಳೆದ ತಿಂಗಳು ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದ ಸಿಂಗ್, ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ಭೇಟಿ ಮಾಡಿ ಚರ್ಚಿಸಿದ್ದರು. ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯನ್ನು ಸಿಧು ಭೇಟಿ ಮಾಡಿದ್ದ ಬೆನ್ನಲ್ಲೇ ಸಿಂಗ್ ಸೋನಿಯಾ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


