ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್ ಸಿಪಿ ಮುಖಂಡ ಎಕನಾಥ್ ಖಾಡ್ಸೆ ಅಳಿಯನ ಬಂಧನ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖಂಡ ಏಕನಾಥ್ ಖಾಡ್ಸೆ ಅವರ ಅಳಿಯನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖಂಡ ಏಕನಾಥ್ ಖಾಡ್ಸೆ ಅವರ ಅಳಿಯನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಗಿರೀಶ್ ಚೌಧರಿಯನ್ನು ಮಂಗಳವಾರ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ, 2016 ರಲ್ಲಿ ಪುಣೆಯಲ್ಲಿ ಜಮೀನು ಖರೀದಿಸುವ ವೇಳೆ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ವಿಚಾರಣೆ ವೇಳೆ ಗಿರೀಸ್ ಚೌಧರಿ ಸರಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುವ ವಿಶೇಷ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುವ ಸಾಧ್ಯತೆಯಿದೆ.
ಬಿಜೆಪಿಯಲ್ಲಿ ಎಕನಾಥ್ ಖಾಡ್ಸೆ ಕಳೆದ ವರ್ಷ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಿದ್ದರು. ಈ ವರ್ಷದ ಆರಂಭದಲ್ಲಿ ಏಕನಾಥ್ ಗೋಡ್ಸೆ ಅವರನ್ನು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


