ರವಿಶಂಕರ್ ಪ್ರಸಾದ್, ಜಾವ್ಡೇಕರ್ ಸೇರಿ 12 ಮಂದಿ ಸಚಿವರ ರಾಜೀನಾಮೆಗೆ ರಾಷ್ಟ್ರಪತಿ ಅಂಗೀಕರ!
ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಮುನ್ನ 12 ಸಚಿವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಮುನ್ನ 12 ಸಚಿವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವ್ಡೇಕರ್, ಹರ್ಷವರ್ಧನ್, ಡಿ.ವಿ ಸದಾನಂದ ಗೌಡ ಸೇರಿದಂತೆ ಒಟ್ಟು 12 ಸಚಿವರು ಸಂಪುಟ ವಿಸ್ತರಣೆ ಹಿನ್ನೆಲೆ ಹೊಸ ಸಚಿವರಿಗೆ ಅವಕಾಶ ಮಾಡಿಕೊಡಲು ರಾಜೀನಾಮೆ ನೀಡಿದ್ದರು. 6 ಕ್ಯಾಬಿನೆಟ್ ಸಚಿವರು, ಓರ್ವ ರಾಜ್ಯ ಖಾತೆ ಸಚಿವ (ಸ್ವತಂತ್ರ ನಿರ್ವಹಣೆ) ಹಾಗೂ 5 ರಾಜ್ಯ ಖಾತೆ ಸಚಿವರು ರಾಜೀನಾಮೆ ನೀಡಿದ್ದಾರೆ.
ರವಿಶಂಕರ್ ಪ್ರಸಾದ್ (ಕಾನೂನು, ನ್ಯಾಯ, ಸಂವಹನ, ಐಟಿ ಹಾಗೂ ಎಲೆಕ್ಟ್ರಾನಿಕ್ಸ್) ಪ್ರಕಾಶ್ ಜಾವ್ಡೇಕರ್ (ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ), ಹರ್ಷವರ್ಧನ್ (ಆರೋಗ್ಯ ಹಾಗೂ ಕುಟುಂಬ ಕಲ್ಯಾಣ) ಡಿ.ವಿ ಸದಾನಂದ ಗೌಡ (ರಸಗೊಬ್ಬರ, ರಾಸಯನಿಕ) ಅವರೊಂದಿಗೆ ಥಾವರ್ ಚಂದ್ ಗೆಹ್ಲೋಟ್ (ಸಾಮಾಜಿಕ ನ್ಯಾಯ, ಸಬಲೀಕರಣ) ರಮೇಶ್ ಪೋಖ್ರಿಯಾಲ್ ನಿಶಾಂಕ್ (ಶಿಕ್ಷಣ) ರಾಜೀನಾಮೆ ನೀಡಿದ ಇತರ ಸಚಿವರಾಗಿದ್ದಾರೆ. ಸಂತೋಷ್ ಕುಮಾರ್ ಗಂಗ್ವಾರ್ ( ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವ, ಸ್ವತಂತ್ರ ನಿರ್ವಹಣೆ) ರಾಜೀನಾಮೆಯನ್ನೂ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
ರಾಜೀನಾಮೆ ನೀಡಿದ ರಾಜ್ಯಖಾತೆ ಸಚಿವರು: ಬಾಬುಲ್ ಸುಪ್ರಿಯೋ (ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ), ಧೋತ್ರೆ ಸಂಜಯ್ ಶಮರಾವ್ (ಶಿಕ್ಷಣ), ರಿಟಾನ್ ಲಾಲ್ ಕಟಾರಿಯಾ (ಜಲ ಶಕ್ತಿ), ಪ್ರತಾಪ್ ಚಂದ್ರ ಸಾರಂಗಿ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಮತ್ತು ದೇಬಶ್ರೀ ಚೌಧುರಿ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


