ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ಮೂವರು ಉದ್ಯೋಗಿಗಳಿಗೆ ನಿರೀಕ್ಷಣ ಜಾಮೀನು
ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್‌ಪಿ) ರೇಟಿಂಗ್ ತಿರುಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರಿಪಬ್ಲಿಕ್ ಟಿವಿ ಉದ್ಯೋಗಿಗಳಿಗೆ ಸೆಷನ್ಸ್ ಕೋರ್ಟ್ ನಿರೀಕ್ಷಣ ಜಾಮೀನು ನೀಡಿದೆ.

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್‌ಪಿ) ರೇಟಿಂಗ್ ತಿರುಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರಿಪಬ್ಲಿಕ್ ಟಿವಿ ಉದ್ಯೋಗಿಗಳಿಗೆ ಸೆಷನ್ಸ್ ಕೋರ್ಟ್ ನಿರೀಕ್ಷಣ ಜಾಮೀನು ನೀಡಿದೆ.
ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ ಶಿವೆಂಡು ಮುಲ್ಹರ್ಕರ್, ರಂಜಿತ್ ವಾಲ್ಟರ್ ಮತ್ತು ಶಿವಸುಬ್ರಮಣ್ಯಂ ಸುಂದರಂ ಎಂಬ ಮೂವರು ನೌಕರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಅವರ ವಕೀಲ ವಿಕ್ರಮ್ ಕಾಮತ್ ಹೇಳಿದ್ದಾರೆ.
ನ್ಯಾಯಾಲಯವು ಸೋಮವಾರ ಮನವಿಯನ್ನು ಆಲಿಸಿತ್ತು. ಇಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಡಿ ಡಿಯೊ ಅವರು ಮೂವರು ಉದ್ಯೋಗಿಗಳ ಜಾಮೀನು ಅನುಮತಿ ನೀಡಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಪ್ರಕರಣದಲ್ಲಿ ಈ ಮೂವರ ಪಾತ್ರ ಇಲ್ಲ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿತ್ತು. ಅಲ್ಲದೆ ದಾಖಲಾಗಿರುವ ಎಫ್ಐಆರ್ ನಲ್ಲಿ ಅವರ ಹೆಸರನ್ನು ನಮೂದಿಸಿಲ್ಲ ಎಂದು ತಿಳಿಸಲಾಗಿತ್ತು.
ತರುವಾಯ, ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು ಅದರಲ್ಲಿ ಆರೋಪಿಗಳೆಂದು ಹೆಸರಿಸಲಾಯಿತು. ಆದ್ದರಿಂದ, ಯಾವುದೇ ವಸ್ತು ಇದ್ದರೂ ಅದು ನ್ಯಾಯಾಲಯದ ಮುಂದೆ ಇತ್ತು. ಆದ್ದರಿಂದ ಅವರ ಪಾಲನೆ ವಿಚಾರಣೆ ಅಗತ್ಯವಿಲ್ಲ ಎಂದು ಕಾಮತ್ ವಾದಿಸಿದ್ದರು.
ಈ ವರ್ಷದ ಜೂನ್‌ನಲ್ಲಿ ಈ ಪ್ರಕರಣದಲ್ಲಿ ದಾಖಲಾದ ಪೂರಕ ಚಾರ್ಜ್‌ಶೀಟ್‌ನಲ್ಲಿ, ಹಿರಿಯ ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರೊಂದಿಗೆ ಮುಂಬೈ ಪೊಲೀಸರು ಮೂವರನ್ನು ಆರೋಪಿಗಳೆಂದು ಹೆಸರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


