ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ: ರಮೇಶ್ ಪೋಖ್ರಿಯಾಲ್, ಸಂತೋಷ್ ಗಂಗ್ವಾರ್ ರಾಜೀನಾಮೆ
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದೆ. 35ಕ್ಕೂ ಹೆಚ್ಚು ಮಂದಿ ಸಂಸದರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದೆ. 35ಕ್ಕೂ ಹೆಚ್ಚು ಸಂಸದರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಬ್ಬರು ಸಚಿವರ ರಾಜೀನಾಮೆ: ಇನ್ನು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಈಗಷ್ಟೇ ರಮೇಶ್ ಪೋಖ್ರಿಯಾಲ್ ಶಶಾಂಕ್ ಮತ್ತು ಕಾರ್ಮಿಕ ಸಚಿವ ಸ್ಥಾನಕ್ಕೆ ಸಂತೋಷ್ ಗಂಗ್ವಾರ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿಯವರು ತಮ್ಮ ಸಂಪುಟ ವಿಸ್ತರಿಸುತ್ತಾರೆ ಅಥವಾ ಪುನರಾಚನೆ ಮಾಡುತ್ತಾರೆ ಎಂದು ಕೇಳಿಬಂದಾಗಿನಿಂದ ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದವು. ಅದರಂತೆ ಈ ಸಚಿವರು ತಮ್ಮ ಸ್ಥಾನಕ್ಕೆ ಪ್ರಧಾನಿಗಳ ಸೂಚನೆ ಮೇರೆಗೆ ರಾಜೀನಾಮೆ ನೀಡಿ ಹೊಸಬರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಹುದ್ದೆಯಲ್ಲಿದ್ದ ಗಂಗ್ವಾರ್ ಅವರು ಇಂದು ಮುಂಜಾನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬಗ್ಗೆ ಕೇಳಿದಾಗ, "ಹೌದು ನಾನು ರಾಜೀನಾಮೆ ನೀಡಿದ್ದೇನೆ, ಹೊಸದಾಗಿ ಏನು ಜವಾಬ್ದಾರಿ ನೀಡಲಿದ್ದಾರೆ ಎಂದು ಗೊತ್ತಿಲ್ಲ'' ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


