ದೇಶ

ಜಮ್ಮು-ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ 4 ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ 4 ಉಗ್ರರ ಹತ್ಯೆ
ಸಂಗ್ರಹ ಚಿತ್ರ
Published On :

ಪುಲ್ವಾಮ: ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಪುಲ್ವಾಮಾದ ಪೂಚಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು, 55 ಆರ್ಆರ್ ಮತ್ತು ಸಿಆರ್‌ಪಿಎಫ್ ತಂಡ ಜಂಟಿಯಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿ ಇದೇ ರೀತಿಯ ಮತ್ತೊಂದು ಕಾರ್ಯಾಚರಣೆಯನ್ನು ನಡೆಸಿದ್ದಾರೆ, ಇದರಲ್ಲಿ ಇಬ್ಬರು ಎಲ್ಇಟಿ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.