ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ನವದೆಹಲಿ: ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿರುವ ಅನುರಾಗ್ ಠಾಕೂರ್ ಅವರು, ಸಚಿವಾಲಯದ ಮೂಲಕ ಕಳೆದ ಏಳು ವರ್ಷಗಳಲ್ಲಿ ಜನರನ್ನು ತಲುಪುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ತರ ಕೆಲಸ ಮಾಡಿದ್ದಾರೆ. ಈ ಪರಂಪರೆಯನ್ನು ಮುನ್ನಡೆಸುಕೊಂಡು ಹೋಗಲು ನಾನು ಬಯಸುತ್ತಿದ್ದೇನೆಂದು ಹೇಳಿದ್ದಾರೆ.
ಸಚಿವಾಲಯದ ಮೂಲಕ ಜನರನ್ನು ತಲುಪಲು ಇಚ್ಛಿಸುತ್ತಿದ್ದೇನೆ. ಪ್ರಧಾನಿ ಮೋದಿಯವರು ನನಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇನೆಂದು ಹೇಳಿದ್ದಾರೆ.
ರೈಲ್ವೇ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿರುವ ವೈಷ್ಣವ್ ಅವರು ಮಾತನಾಡಿ, ಕಳೆದ 67 ವರ್ಷಗಳಲ್ಲಿ ರೈಲ್ವೇ ಸಚಿವಾಲಯದಲ್ಲಿ ಅತ್ಯುತ್ತಮ ಕಾರ್ಯಗಳು ನಡೆದಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಮುನ್ನಡೆಸಿಕೊಂಡು ಹೋಗಲು ನಾನು ಈ ಸ್ಥಾನದಲ್ಲಿದ್ದೇನೆಂದು ಹೇಳಿದ್ದಾರೆ.
ಅಧಿಕಾರ ಸ್ವೀಕಾರ ಮಾಡಿದ ಬಳಿಕ ಟ್ವಿಟರ್ ನಲ್ಲಿಯೂ ಟ್ವೀಟ್ಮಾಡಿರುವ ವೈಷ್ಣವ್ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇಂದು ಕೇಂದ್ರ ರೈಲ್ವೇ ಸಚಿವನಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಮತ್ತೊಮ್ಮೆ ನನ್ನ ಹೃದಯಾಳದಿಂದ ಪ್ರಧಾನಿ ಮೋದಿಯವರಿಗೆ ಕೃತಜ್ಞತೆಯನ್ನು ಅರ್ಪಿಸುತ್ತೇನೆಂದು ಹೇಳಿದ್ದಾರೆ.
ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ, ಖರಗ್ಪುರ –ಐಐಟಿಯಿಂದ ಎಂ.ಟೆಕ್ ಪದವಿ ಪಡೆದಿರುವ ವೈಷ್ಣವ್ ಅವರು, ಜಾಗತಿಕ ಮಟ್ಟದ ಜನರಲ್ ಎಲೆಕ್ಟ್ರಿಕಲ್ಸ್ ಮತ್ತು ಸೀಮನ್ಸ್ ನಂತಹ ಪ್ರಮುಖ ಕಂಪನಿಗಳನ್ನು ಮುನ್ನಡೆಸುವಲ್ಲಿ ಪ್ರಧಾನ ಪಾತ್ರವಹಿಸಿದ್ದರು.
1994ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್, ಹದಿನೈದು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಪ್ರಮುಖವಾದ ಜವಾಬ್ದಾರಿಗಳನ್ನು ನಿರ್ವಹಿಸುವ ಜತೆಗೆ, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಗೆ ಒಂದು ಉತ್ತಮ ಚೌಕಟ್ಟನ್ನು ರೂಪಿಸಿದ್ದರು. ಈ ಅನುಭವ, ತಾವು ನಿರ್ವಹಿಸುವ ರೈಲ್ವೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗಲಿದೆ.
ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


