ದೇಶ

ತಮಿಳುನಾಡು ಬಿಜೆಪಿಗೆ ನೂತನ ಸಾರಥಿ: ರಾಜ್ಯಾಧ್ಯಕ್ಷರಾಗಿ ಕೆ. ಅಣ್ಣಾಮಲೈ ನೇಮಕ

ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ತಮಿಳುನಾಡು ಬಿಜೆಪಿಗೆ ನೂತನ ಸಾರಥಿ: ರಾಜ್ಯಾಧ್ಯಕ್ಷರಾಗಿ ಕೆ. ಅಣ್ಣಾಮಲೈ ನೇಮಕ
ಕೆ ಅಣ್ಣಾಮಲೈ
Published On :

ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್ ಮುರುಗನ್ ಅವರು ಕೇಂದ್ರ ಸಚಿವ ಸಂಪುಟ ಸೇರಿದ ಬೆನ್ನಲ್ಲೇ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 

ಕಳೆದ ಎರಡು ತಿಂಗಳ ಹಿಂದೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ ಅವರು ಡಿಎಂಕೆ ಅಭ್ಯರ್ಥಿ ಆರ್ ಇಲಂಗೋ ವಿರುದ್ಧ 24 ಸಾವಿರ ಮತಗಳ ಅಂತರದಿಂದ ಸೋಲನ್ನಪ್ಪಿದ್ದರು. 

ಪೊಲೀಸ್ ಹುದ್ದೆಗೆ ರಾಜಿನಾಮೆ ನೀಡಿದ್ದ ಅಣ್ಣಾಮಲೈ ಅವರು ಕಳೆದ ವರ್ಷ ಆಗಸ್ಟ್ 25ರಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.