ಪಂಜಾಬ್ ಚುನಾವಣೆ: ಎಲ್ಲಾ 117 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ- ಬಿಎಲ್ ಸಂತೋಷ್
2022ರ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.

ಚಂಡೀಗಢ: 2022ರ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿಯ ಪಂಜಾಬ್ ಘಟಕದ ಸಭೆಯಲ್ಲಿ ಭಾಗವಹಿಸಿದ ಸಂತೋಷ್ ಪಕ್ಷದ ರಾಜ್ಯ ನಾಯಕರು ಮತ್ತು ಇತರರೊಂದಿಗೆ ಪಂಜಾಬ್ ರಾಜಕೀಯದ ಬಗ್ಗೆ ವಿವರವಾದ ಚರ್ಚೆ ನಡೆಸಿದರು.
ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ತೆಗೆದುಹಾಕಲು ಇಡೀ ಪ್ರತಿಪಕ್ಷಗಳು ಎಲ್ಲ ತಂತ್ರಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಇನ್ನು ಬಿಜೆಪಿ ವಿಶ್ವದ ಅತಿದೊಡ್ಡ ಪಕ್ಷವಾಗಿದೆ ಎಂದರು.
ಕೃಷಿ ಕಾನೂನುಗಳು ಸಮೃದ್ಧಿಯನ್ನು ತರುತ್ತವೆ ಎಂದು ರೈತರು ಅರಿತುಕೊಂಡಿದ್ದರಿಂದ ಇದರ ವಿರುದ್ಧದ ವಿರೋಧದ ಸುಳ್ಳು ಪ್ರಚಾರ ಶೀಘ್ರದಲ್ಲೇ ಕುಸಿಯುತ್ತದೆ ಎಂದು ಸಂತೋಷ್ ಹೇಳಿದರು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೇಂದ್ರ ಕಾನೂನುಗಳ ವಿರುದ್ಧ ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಅವುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿದ್ದಾರೆ.
ಮೋದಿ ಯಾವಾಗಲೂ ರೈತರ ಪರವಾಗಿದ್ದಾರೆ. ಕೃಷಿ ಕ್ಷೇತ್ರದ ಹಿತಾಸಕ್ತಿಗಳು ಅವರಿಗೆ ಮತ್ತು ಅವರ ಸರ್ಕಾರಕ್ಕೆ ಪ್ರಮುಖವಾಗಿವೆ ಎಂದು ಸಂತೋಷ್ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್, ಪಂಜಾಬ್ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮಾ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


