ದೇಶ

ರವಿಶಂಕರ್ ಪ್ರಸಾದ್ ತಮಿಳುನಾಡು ನೂತನ ರಾಜ್ಯಪಾಲ?

ತಮಿಳುನಾಡಿನ ರಾಜ್ಯಪಾಲರನ್ನಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ನೇಮಿಸಲಾಗುತ್ತಿದೆ ಎಂದು ವರದಿಯಾಗಿದೆ.

ರವಿಶಂಕರ್ ಪ್ರಸಾದ್ ತಮಿಳುನಾಡು ನೂತನ ರಾಜ್ಯಪಾಲ?
ರವಿಶಂಕರ್ ಪ್ರಸಾದ್
Published On :

ನವದೆಹಲಿ: ತಮಿಳುನಾಡಿನ ರಾಜ್ಯಪಾಲರನ್ನಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ನೇಮಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ನ್ಯಾಯ ಖಾತೆ ಸಚಿವರಾಗಿದ್ದ ಅವರು ಇತ್ತೀಚಿನ ನಡೆದ ಸಂಪುಟ ವಿಸ್ತರಣೆಗೆ ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ  ಕೇಂದ್ರ ಸರ್ಕಾರ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಿಸಲು  ನಿರ್ಧರಿಸಿದೆ.

ಪ್ರಸ್ತುತ ಭನ್ವರಿಲಾಲ್ ಪುರೋಹಿತ್  ತಮಿಳುನಾಡು  ರಾಜ್ಯಪಾಲರಾಗಿದ್ದಾರೆ. ಬಿಜೆಪಿ  ಕೇಂದ್ರ  ನಾಯಕರ ಸೂಚನೆಯಂತೆ ಅವರು ಶನಿವಾರ ದೆಹಲಿಗೆ ತೆರಳಿದ್ದು, ರಾಷ್ಟ್ರಪತಿ  ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಈ  ಕ್ರಮವಾಗಿ  ರವಿಶಂಕರ್ ಪ್ರಸಾದ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.