ದೇಶ

ಜುಲೈ15 ಕ್ಕೆ ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಜುಲೈ 15 ರಂದು ಸ್ವಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುವ ಸಾಧ್ಯತೆ ಇರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಜುಲೈ15 ಕ್ಕೆ ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜುಲೈ 15 ರಂದು ಸ್ವಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುವ ಸಾಧ್ಯತೆ ಇರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ವೇಳೆ ಸಿಗ್ರಾದಲ್ಲಿ ನಿರ್ಮಿಸಲಾಗಿರುವ ರುದ್ರಾಕ್ಷ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಜಪಾನ್ ಸಹಯೋಗದೊಂದಿಗೆ ಇದನ್ನು ನಿರ್ಮಿಸಲಾಗಿದ್ದು, ಭಾರತದಲ್ಲಿನ ಜಪಾನ್ ರಾಯಭಾರಿ ಜೊತೆಗೂಡಿ ಪ್ರಧಾನಿ ನರೇಂದ್ರ ಉದ್ಘಾಟಿಸಲಿದ್ದು, ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಅವರ ವಿಡಿಯೋ ಸಂದೇಶವನ್ನು ಅಲ್ಲಿ ಪ್ರಸಾರ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಭದ್ರತಾ ವ್ಯವಸ್ಥೆಗಳ ದೃಷ್ಟಿಯಿಂದ ವಿಶೇಷ ರಕ್ಷಣಾ ಗುಂಪು ಇಂದು ಸಂಜೆ ವೇಳೆಗೆ ವಾರಾಣಸಿಗೆ ತಲುಪಲಿದ್ದು, ಸ್ಥಳದ ಸುರಕ್ಷತೆಗಾಗಿ ನೀಲನಕ್ಷೆಯನ್ನು ಸಿದ್ಧಪಡಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.