ದೇಶದ ಮೊದಲ ನೈಸರ್ಗಿಕ ಅನಿಲ ಎಲ್ ಎನ್ ಜಿ ಘಟಕ ಉದ್ಘಾಟನೆ
ನಾಗ್ಪುರದಲ್ಲಿನ ದೇಶದ ಮೊದಲ ಖಾಸಗಿ ದ್ರವೀಕೃತ ನೈಸರ್ಗಿಕ ಅನಿಲ -ಎಲ್ಎನ್ಜಿ ಘಟಕವನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜು.11 ರಂದು ಉದ್ಘಾಟಿಸಿದರು.

ನಾಗ್ಪುರ: ನಾಗ್ಪುರದಲ್ಲಿನ ದೇಶದ ಮೊದಲ ಖಾಸಗಿ ದ್ರವೀಕೃತ ನೈಸರ್ಗಿಕ ಅನಿಲ -ಎಲ್ಎನ್ ಜಿ ಘಟಕವನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜು.11 ರಂದು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಒಟ್ಟಾರೆ ಸಾಗಣೆ ವೆಚ್ಚವನ್ನು ತಗ್ಗಿಸುವ ಶುದ್ಧ ಮತ್ತು ವೆಚ್ಚಪರಿಣಾಮಕಾರಿ ಇಂಧನ ಈ ಎಲ್ಎನ್ಜಿ ಎಂದರು. ಇದು ಸಾಕಷ್ಟು ಉದ್ಯೋಗಾವಕಾಶ ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದು ಭವಿಷ್ಯದಲ್ಲಿ ಸಾರಿಗೆ ವಲಯದಲ್ಲಿ ಕ್ರಾಂತಿ ತರಲಿದೆ ಎಂದು ಗಡ್ಕರಿ ಹೇಳಿದರು.
ಎಥನಾಲ್, ವಿದ್ಯುತ್, ಸಂಕುಚಿತ ನೈಸರ್ಗಿಕ ಅನಿಲ, ದ್ರವೀಕೃತ ನೈಸರ್ಗಿಕ ಅನಿಲ ಮೊದಲಾದವನ್ನು ಸಾಂಪ್ರದಾಯಿಕ ಇಂಧನಕ್ಕೆ ಪರ್ಯಾಯವಾಗಿ ಬಳಸಬಹುದು. ಕೃಷಿ ಉತ್ಪನ್ನಗಳಿಂದ ತಯಾರಿಸಲಾದ ಜೈವಿಕ ಎಥನಾಲ್ ಪ್ರಯೋಗ ಯಶಸ್ಸು ಕಂಡಿದ್ದು, ದೇಶದಲ್ಲಿ ಹೆಚ್ಚುವರಿ ಉತ್ಪಾದನೆಯಾಗುತ್ತಿರುವ ಸಕ್ಕರೆ ಮತ್ತು ಅಕ್ಕಿಯನ್ನು ಜೈವಿಕ ಇಂಧನವಾಗಿ ಬಳಸಬಹುದು ಎಂದೂ ಸಹ ಗಡ್ಕರಿ ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


