ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿ: ಪ್ರಧಾನಿ ಮೋದಿ
ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ.

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ.
ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ಅಂತವರು ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರತಿಭಾವಂತರಲ್ಲಿ ಕೆಲವರು ಎಲೆಮರೆ ಕಾಯಿಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಅಂತಹ ಸ್ಪೂರ್ತಿ ತುಂಬುವ, ಬೇರೆಯವರಿಗೆ ಮಾರ್ಗದರ್ಶನವಾಗಬಲ್ಲ ಸ್ಪೂರ್ತಿದಾಯಕ ಜನರ ಬಗ್ಗೆ ನಿಮಗೆ ತಿಳಿದಿದ್ದರೆ ನೀವು ಅಂತವರನ್ನು ನಾಮನಿರ್ದೇಶನ ಮಾಡಿ ಎಂದಿದ್ದಾರೆ.
#PeoplesPadma ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರತಿಭಾವಂತರ ಹೆಸರುಗಳನ್ನು ನಾಮನಿರ್ದೇಶನ ಮಾಡಿ, ನಾಮನಿರ್ದೇಶನ ಸೆಪ್ಟೆಂಬರ್ 15ರವರೆಗೆ ತೆರೆದಿರುತ್ತದೆ. ಎಂದು ಸರ್ಕಾರದ ಪದ್ಮಪ್ರಶಸ್ತಿಯ ವೆಬ್ ಸೈಟ್ ನ್ನು ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಪದ್ಮ ಪ್ರಶಸ್ತಿಗಳೆಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನೊಳಗೊಂಡಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. ಕಳೆದ ಕೆಲವು ವರ್ಷಗಳಲ್ಲಿ, ಮೋದಿ ಸರ್ಕಾರವು ಸಮಾಜಕ್ಕೆ ನೀಡಿದ ಜೀವಮಾನದ ಕೊಡುಗೆಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳಿಗಾಗಿ ಪದ್ಮ ಪ್ರಶಸ್ತಿಗಳನ್ನು ಸಮಾಜದ ವಿವಿಧ ವರ್ಗದ ಜನರಿಗೆ ನೀಡಿ ಗೌರವಿಸುತ್ತ ಬಂದಿದೆ.
1954 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


