ಪುದುಚೇರಿಯಲ್ಲಿ ಜುಲೈ16 ರಂದು ಶಾಲಾ-ಕಾಲೇಜ್ ಪುನರಾರಂಭ- ಮುಖ್ಯಮಂತ್ರಿ ಎನ್. ರಂಗಸ್ವಾಮಿ
ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.

ಪುದುಚೇರಿ: ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.
ಜುಲೈ 16 ರಂದು ಕಾಲೇಜ್ ಗಳು ಪುನರಾರಂಭಗೊಳ್ಳಲಿವೆ. ಶಾಲೆಗಳು ಭಾಗಶಃ ಪುನಃ ತೆರೆಯಲ್ಪಡುತ್ತವೆ ಮತ್ತು ಒಂಬತ್ತರಿಂದ 12 ನೇ ತರಗತಿಗಳಿಗೆ ಮಾತ್ರ ತರಗತಿಗಳು ಆ ದಿನ ಪುನರಾರಂಭಗೊಳ್ಳುತ್ತವೆ ಎಂದು ಮುಖ್ಯಮಂತ್ರಿ ಎನ್. ರಂಗಸ್ವಾಮಿ ಭಾನುವಾರ ಹೇಳಿದರು.
ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾದ ಐದು ಮಂತ್ರಿ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಪಟ್ಟಿಯನ್ನು ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳುಸಾಯಿ ಸುಂದರರಾಜನ್ ಅವರಿಗೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಈಗ ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.ಪುದುಚೇರಿಯಲ್ಲಿ ಭಾನುವಾರ ಕೋವಿಡ್-19 ನಿಂದ ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಹೊಸ ಪ್ರಕರಣಗಳ ಸಂಖ್ಯೆ 145 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


