ನೀಟ್ ಪರೀಕ್ಷೆ ಆಗಸ್ಟ್ 1ರಿಂದ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.
ಈ ಹಿಂದೆ ಆಗಸ್ಟ್ 1ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು 'ಕೋವಿಡ್ ನಿಯಮಗಳ ಪಾಲನೆಯೊಂದಿಗೆ ದೇಶದಾದ್ಯಂತ 'ನೀಟ್-ಯುಜಿ 2021' ಪರೀಕ್ಷೆಯು ಸೆಪ್ಟೆಂಬರ್ 12ರಂದು ನಡೆಯಲಿದೆ. ಅರ್ಜಿ ಪ್ರಕ್ರಿಯೆ ನಾಳೆ (ಮಂಗಳವಾರ) ಸಂಜೆ 5 ಗಂಟೆಯಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ವೆಬ್‌ಸೈಟ್ ಮೂಲಕ ಪ್ರಾರಂಭವಾಗಲಿದೆ' ಎಂದು ಮಾಹಿತಿ ನೀಡಿದ್ದಾರೆ.
'ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಒದಗಿಸಲಾಗುವುದು. ಪ್ರವೇಶ ಹಾಗೂ ನಿರ್ಗಮನದ ಸಮಯ, ಸಂಪರ್ಕ ರಹಿತ ನೋಂದಣಿ ಹಾಗೂ ಆಸನ ವ್ಯವಸ್ಥೆ, ಸ್ಯಾನಿಟೈಸೇಷನ್ ಸೇರಿದಂತೆ ಇತರೆ ನಿಬಂಧನೆಗಳನ್ನು ಖಚಿತಪಡಿಸಲಾಗುವುದು. ದೈಹಿಕ ಅಂತರವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ 155ರ ಬದಲು 198 ನಗರಗಳಲ್ಲಿ ಪರೀಕ್ಷೆ ಆಯೋಜಿಸಲಾಗುವುದು. ಹಾಗೆಯೇ ಪರೀಕ್ಷಾ ಕೇಂದ್ರಗಳನ್ನು 3,862ಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


