ಕೋವಿಡ್-19: ದೇಶದಲ್ಲಿ ಇಂದು ಒಂದೇ ದಿನ 31,443 ಹೊಸ ಕೊರೋನಾ ಪ್ರಕರಣ, 2020 ಮಂದಿ ಸಾವು
ಕಳೆದ 118 ದಿನಗಳಲ್ಲಿ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಕಡಿಮೆ ಕೋವಿಡ್-19 ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 31,443 ಹೊಸ ಕೊರೋನಾ ಕೇಸುಗಳು ಪತ್ತೆಯಾಗಿವೆ.

ನವದೆಹಲಿ: ಕಳೆದ 118 ದಿನಗಳಲ್ಲಿ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಕಡಿಮೆ ಕೋವಿಡ್-19 ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 31,443 ಹೊಸ ಕೊರೋನಾ ಕೇಸುಗಳು ಪತ್ತೆಯಾಗಿವೆ. ಗುಣಮುಖ ಹೊಂದಿದವರ ಸಂಖ್ಯೆ ಶೇಕಡಾ 97.28ಕ್ಕೇರಿದೆ. 2,020 ಸಾವುಗಳೊಂದಿಗೆ ಮೃತರ ಸಂಖ್ಯೆ 4,10,784 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 4 ಲಕ್ಷದ 31 ಸಾವಿರದ 315ಕ್ಕೆ ಇಳಿಕೆಯಾಗಿದ್ದು, ಕಳೆದ 109 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 49,007 ಮಂದಿ ರೋಗಿಗಳು ಗುಣಮುಖ ಹೊಂದಿದ್ದಾರೆ. ದೇಶದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 1.40ರಷ್ಟಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 49,007 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಲಕ್ಷದ 63 ಸಾವಿರದ 720ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17 ಲಕ್ಷದ 40 ಸಾವಿರದ 325 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 43 ಕೋಟಿಯ 40 ಲಕ್ಷದ 58 ಸಾವಿರದ 138 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇನ್ನು ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 39.46 ಕೋಟಿಗೂ ಅಧಿಕ ಲಸಿಕೆಯನ್ನು ನೀಡಿದೆ. 1.91 ಕೋಟಿಗೂ ಅಧಿಕ ಉಳಿದಿರುವ ಮತ್ತು ಬಳಕೆಯಾಗದಿರುವ ಡೋಸ್ ಗಳು ಇನ್ನೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಇಂದು ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ ಒಟ್ಟು ನಿರುಪಯೋಗ ಡೋಸ್ ಗಳು ಸೇರಿ 37 ಕೋಟಿಯ 55 ಲಕ್ಷದ 38 ಸಾವಿರದ 390 ಡೋಸ್ ಗಳು ಬಳಕೆಯಾಗಿದೆ ಎಂದು ಸರ್ಕಾರ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


