ಪಂಜಾಬ್ ರಾಜಕೀಯ ಬೇಗುದಿ ಉಲ್ಬಣ: ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಇಂದು ದೆಹಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಇಂದು ದೆಹಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.
ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಮಾಜಿ ಸಚಿವ ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ ಹಾಡಲು ಕೊನೆಗೂ ಸಂಧಾನ ಸೂತ್ರ ಸಿದ್ಧಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಿಧು ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ನಿವಾಸದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ನವಜೋತ್ ಸಿಂಗ್ ಸಿಧು ಭೇಟಿ ಮಾಡಿದ್ದಾರೆ.ಈ ವೇಳೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಕೂಡ ಉಪಸ್ಥಿತರಿದ್ದರು.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್ನಲ್ಲಿ ನಡೆಯುತ್ತಿರುವ ಭಿನ್ನಮತಕ್ಕೆ ಕೊನೆಗೂ ಪೂರ್ಣ ವಿರಾಮ ಬೀಳುವ ಸಾಧ್ಯತೆಯಿದೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೇಮಕ ಮಾಡಲು ಕಾಂಗ್ರೆಸ್ ವರಿಷ್ಠರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


