ನಕಲಿ ಮದ್ಯ ಸೇವನೆ: ಬಿಹಾರದ ವೆಸ್ಟ್ ಚಂಪರನ್ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆ
ನಕಲಿ ಮದ್ಯ ಸೇವನೆಯಿಂದ ಬಿಹಾರದ ಪಶ್ಚಿಮ ಚಂಪರನ್ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ.

ಬೆಟ್ಟೈ (ಬಿಹಾರ): ನಕಲಿ ಮದ್ಯ ಸೇವನೆಯಿಂದ ಬಿಹಾರದ ಪಶ್ಚಿಮ ಚಂಪರನ್ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ.
ಇವರಲ್ಲಿ ನಿನ್ನೆ ಒಂದೇ ದಿನ 8 ಮಂದಿ ಮೃತಪಟ್ಟಿದ್ದಾರೆ. ಮೃತರು ಡುರಾವಾ, ಜೋಗಿಯಾ ಮತ್ತು ಬಾಗಾಹಿ ಗ್ರಾಮಗಳಿಗೆ ಸೇರಿದವರು ಎಂದು ಜಿಲ್ಲಾಧಿಕಾರಿ ಕುಂದನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಇದುವರೆಗೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಓರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರಾಜ್ಯದಲ್ಲಿ 2016ರಿಂದಲೇ ಲಿಕ್ಕರ್ ಗಳ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


