ಸೆಪ್ಟೆಂಬರ್ ನೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣ, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: ಯುಜಿಸಿ
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ( ಯುಜಿಸಿ) ಹೊಸ ಮಾರ್ಗಸೂಚಿ ಪ್ರಕಾರ, ದೇಶಾದ್ಯಂತ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜ್ ಗಳಲ್ಲಿ ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

ನವದೆಹಲಿ: ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ (ಯುಜಿಸಿ) ಹೊಸ ಮಾರ್ಗಸೂಚಿ ಪ್ರಕಾರ, ದೇಶಾದ್ಯಂತ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜ್ ಗಳಲ್ಲಿ ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ಸಿಬಿಎಸ್ಇ, ಐಸಿಎಸ್ ಇ ಮತ್ತು ಎಲ್ಲಾ ರಾಜ್ಯಗಳ ಬೋರ್ಡ್ ಗಳು ಫಲಿತಾಂಶ ಪ್ರಕಟಣೆ ನಂತರವಷ್ಟೇ ಪದವಿ ತರಗತಿಗಳ ದಾಖಲಾತಿ ಪ್ರಕ್ರಿಯೆ ಆರಂಭಿಸುವಂತೆ ವಿಶ್ವ ವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಸೂಚಿಸಿದೆ.
ಬೋಧನೆ-ಕಲಿಕೆಯ ಪ್ರಕ್ರಿಯೆಯು ಆಫ್‌ಲೈನ್, ಆನ್‌ಲೈನ್ ಅಥವಾ ಸಂಯೋಜಿತ ಕ್ರಮದಲ್ಲಿ ಮುಂದುವರಿಯಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ತರಗತಿಗಳು, ವಿರಾಮಗಳು, ಪರೀಕ್ಷೆಗಳ ನಡವಳಿಕೆ, ಸೆಮಿಸ್ಟರ್ ವಿರಾಮ ಇತ್ಯಾದಿಗಳಿಗೆ ಸಂಸ್ಥೆಗಳು ಯೋಜನೆ ರೂಪಿಸಬಹುದಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಅಕ್ಟೋಬರ್ 1 ರಿಂದ ಜುಲೈ 31 ರವರೆಗೆ ಕಾಲಕಾಲಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಅಗತ್ಯ ನಡವಳಿಗಳು ಮತ್ತು ಸಲಹೆಗಳನ್ನು ಪಾಲಿಸುವಂತೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಸಾಂಕ್ರಾಮಿಕ ಸಮಯದಲ್ಲಿ ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಪ್ರವೇಶ ರದ್ದತಿ ಅಥವಾ ವಲಸೆಯ ಪ್ರಕರಣಗಳಲ್ಲಿ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಶ್ವವಿದ್ಯಾನಿಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
ಆಗಸ್ಟ್ 31 ರೊಳಗೆ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಅಂತಿಮ ವರ್ಷ ಅಥವಾ ಅಂತಿಮ ಅವಧಿಯ ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯಗೊಳಿಸಲಾಗಿದೆ. ಆಫ್ ಲೈನ್ ಅಥವಾ ಅನ್ ಲೈನ್ ನಲ್ಲಿ ಪರೀಕ್ಷೆ ನಡೆಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


